‘ಕಮಲ’ ಬಿಟ್ಟು ‘ತೆನೆ’ ಹೊತ್ತ ಈ ಪ್ರಭಾವಿ ಮುಖಂಡರು..!!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ರಂಗೇರುತ್ತಿದೆ. ಅಲ್ಲದೆ ಪಕ್ಷಾಂತರ ಅಲೆ ಹೆಚ್ಚಾಗುತ್ತಿದ್ದು, ಅನ್ಯ ಪಕ್ಷಗಳ ಮುಖಂಡರು ಜೆಡಿಎಸ್ ನತ್ತ ವಲಸೆ ಬರುತ್ತಿದ್ದಾರೆ.
ಕೊತ್ತೇಗಾಲ ವೀರಶೈವ ಧರ್ಮದ ಮುಖಂಡರುಗಳು ಬಿಜೆಪಿ ತೊರೆದು ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ. ಈ ಬಾರಿ ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪಣ ತೊಟ್ಟಿರುವ ಜೆಡಿಎಸ್ ದಿನದಿಂದ ದಿನಕ್ಕೆ ಪ್ರಬಲಗೊಳ್ಳುತ್ತಿದ್ದು, ಇದಕ್ಕೆ ಸಾಕ್ಷಿ, ಸಮಾವೇಶಕ್ಕೆ ಹರಿದು ಬರುತ್ತಿರುವ ಜನಸಾಗರ. ಈ ಎಲ್ಲಾ ಬೆಳವಣಿಗೆ ಅನುಸಾರ. ಈ ಬಾರಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಎರಡು ಮಾತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
Comments