ಜೆಡಿಎಸ್ ಪರ ‘ಜೈ’ ಎಂದ ‘ಕೈ’ ಪಕ್ಷದ ಅಭ್ಯರ್ಥಿ…!!
ವಿಧಾನಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ, ಅಲ್ಲದೆ ಪಕ್ಷಾಂತರ ಪರ್ವ ಹೆಚ್ಚುತ್ತಿದ್ದು, ಅನ್ಯ ಪಕ್ಷದ ಮುಖಂಡರು ಜೆಡಿಎಸ್ ನತ್ತ ಮುಖ ಮಾಡಿದ್ದಾರೆ. ಈ ಬಾರಿ ಕುಮಾರಸ್ವಾಮಿ ಚನ್ನಪಟ್ಟಣ ಹಾಗೂ ರಾಮನಗರದಿಂದ ಸ್ಪರ್ಧೆ ಮಾಡಿದ್ದಾರೆ.
ಅಚ್ಚರಿ ಏನೆಂದರೆ ಚನ್ನಪಟ್ಟಣದ ಕುಮಾರಸ್ವಾಮಿಯೇ ಗೆಲ್ಲುತ್ತಾರೆ ಅಂತಾ ರಾಮನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಹೌದು ರಾಮನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು.. ಇದೇ ವೇಳೆ ಮಾತನಾಡುವ ಸಂದರ್ಭದಲ್ಲಿ ಚನ್ನಪಟ್ಟಣದಲ್ಲಿ ಕುಮಾರಣ್ಣ ಗೆಲ್ತಾರೆ, ಅದರಲ್ಲಿ ಯಾವುದೇ ಸಂಶಯವಿಲ್ಲ, ದೇವರು ಅವರಿಗೆ ಒಳ್ಳೆಯದು ಮಾಡ್ಲಿ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು. ಇಕ್ಬಾಲ್ ಹುಸೇನ್ ಈ ರೀತಿ ಹೇಳುತ್ತಿದ್ದಂತೆ ಅಲ್ಲೇ ಇದ್ದ ಕಾಂಗ್ರೆಸ್ ಕಾರ್ಯಕರ್ತರಲ್ಲೇ ಕೆಲಕಾಲ ಗೊಂದಲವುಂಟಾಯಿತು. ಇದರಿಂದ ಸಿಎಂ ಆಪ್ತ ರೇವಣ್ಣಗೆ ಬಾರಿ ಮುಖಭಂಗವಾಗಿದೆ,
Comments