ಜೆಡಿಎಸ್ ನಾಯಕ ಮಧು ಬಂಗಾರಪ್ಪ ಪರ ಪ್ರಚಾರ ಮಾಡಲಿದ್ದಾರಾ ಈ ಸ್ಟಾರ್ ನಟ..!!



ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅನೇಕ ಚಿತ್ರ ನಟ-ನಟಿಯರು ಜೆ ಡಿ ಎಸ್ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರ ಪರ ಪ್ರಚಾರಕ್ಕೆ ನನ್ನ ಅವಶ್ಯಕತೆ ಇಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ.
ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುವಾಗ ಪ್ರತಿಕ್ರಿಯೆ ನೀಡಿರುವ ಶಿವಣ್ಣ, ಸೊರಬದಲ್ಲಿ ಶಾಸಕರಾಗಿ ಮಧುಬಂಗಾರಪ್ಪ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಅವರಿಗೆ ನನ್ನ ಪ್ರಚಾರದ ಅವಶ್ಯಕತೆ ಇಲ್ಲ ಎಂದರು.
Comments