ಬಿಜೆಪಿಯ ಮತ್ತೊಂದು ಪ್ರಭಾವಿ ವಿಕೆಟ್ ಜೆಡಿಎಸ್ ಪಾಲು..!!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ರಂಗೇರುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಮಾನದಲ್ಲಿ ಮಾತುಕತೆ ನಡೆಸಿರುವ ಬಗ್ಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ ಎ ಶರವಣ ಬಹಿರಂಗ ಸವಾಲೆಸೆದಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ ಎ ಶರವಣ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮೂಲವನ್ನೇ ಮರೆತು ಮಾತನಾಡುತ್ತಿದ್ದಾರೆ.ನೀವು ಎಲ್ಲಿಂದ ಬಂದ್ದಿದ್ದೀರಿ ಎಂದು ಆತ್ಮಾವಲೋಕನ ಮಾಡಿಕೊಳ್ಳಿ.ನೀವು ಯಾರ ಗರಡಿಯಲ್ಲಿ ಪಳಗಿದ್ದೀರ ಎಂಬುದನ್ನು ಮರೆತು ಮಾತನಾಡುತ್ತಿದ್ದೀರಿ ಇದು ನಿಮಗೆ ಶೋಭೆ ತರುವುದಿಲ್ಲ ಎಂದು ಹರಿಹಾಯ್ದರು. ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಧೃಡವಾಗಿದೆ .ಯಾರ ಮನೆ ಬಾಗಿಲೂ ತಟ್ಟದೆ ಸ್ವಂತ ಬಲದ ಮೇಲೆ ಜೆಡಿಎಸ್ ಪಕ್ಷ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಜಿಲ್ಲೆಯಲ್ಲಿಯೂ ಸಹ ಜೆಡಿಎಸ್ ಪಕ್ಷ 10 ಸ್ಥಾನ ಗೆಲ್ಲಲಿದೆ. ರಾಜ್ಯದ ಜನರ ತೆರಿಗೆ ಹಣ ಲೂಟಿ ಮಾಡಿರುವ ಕಾಂಗ್ರೆಸ್ ಹಾಗು ಬಿಜೆಪಿ ಪಕ್ಷಕ್ಕೆ ಈ ಭಾರಿ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ತುಮಕೂರು ನಗರದ ಆರ್ಯವೈಶ್ಯ ಸಮುದಾಯದ ಪ್ರಭಾವಿ ಮುಖಂಡರಾದ ಶ್ರೀಧರ ಮೂರ್ತಿ. ಅಮರನಾಥ್ ಸೇರಿದಂತೆ ಹಲವು ಆರ್ಯವೈಶ್ಯ ಸಮುದಾಯದ ಮುಖಂಡರು ಬಿಜೆಪಿ ಪಕ್ಷ ತೊರೆದು ಟಿ ಎ ಶರವಣ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಸುದ್ದಿಗೋಷ್ಠಿಯಲ್ಲಿ ತುಮಕೂರು ನಗರ ಜೆಡಿಎಸ್ ಅಭ್ಯರ್ಥಿ ಎನ್.ಗೋವಿಂದರಾಜು ಉಪಸ್ಥಿತರಿದ್ದರು
Comments