ಜೆಡಿಎಸ್ ಪರ ಪ್ರಚಾರಕ್ಕಿಳಿದ ಸ್ಯಾಂಡಲ್ ವುಡ್ ಸ್ಟಾರ್ ಪತ್ನಿ..!!
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜಕೀಯ ರಂಗೇರುತ್ತಿದೆ. ಹಲವು ಚಿತ್ರ ನಟ-ನಟಿಯರು ಜೆಡಿಎಸ್ ಪರ ಪ್ರಚಾರಕ್ಕಿಳಿದಿದ್ದಾರೆ. ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಅಬ್ಬರದ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ಚುನಾವಣಾ ಪ್ರಚಾರಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಟುಂಬವನ್ನು ನೋಡಿಕೊಳ್ಳುವ ಜವಾಬ್ದಾರಿ ಕೂಡ ನನ್ನ ಮೇಲಿದೆ. ಕೌಟುಂಬಿಕ ಕಾರಣಗಳಿಂದಾಗಿ ಕೆಲ ದಿನ ಸಕ್ರೀಯ ರಾಜಕಾರಣದಿಂದ ದೂರ ಇದ್ದೆ. ಈಗ ಬಿಡುವು ಸಿಕ್ಕಿದೆ ಹಾಗಾಗಿ ಚುನಾವಣಾ ಪ್ರಚಾರದಲ್ಲಿ ಸಂಪೂರ್ಣವಾಗಿ ತೊಡಗಲಿದ್ದೇನೆ ಎಂದು ಹೇಳಿದರು. ಶಿವಮೊಗ್ಗ ಅಕ್ಕ ಪಕ್ಕದ ಜಿಲ್ಲೆಗಳಲ್ಲಿ ಜೆಡಿಎಸ್ ಪರ ಪ್ರಚಾರ ಮಾಡಲಿದ್ದೇನೆ. ಮೊದಲಿಗೆ ಶಿವಮೊಗ್ಗ ಗ್ರಾಮಾಂತರ, ತೀರ್ಥಹಳ್ಳಿ, ಸೊರಬದಲ್ಲಿ ಪ್ರಚಾರ ಮಾಡಲಿದ್ದೇವೆ ಎಂದು ತಿಳಿಸಿದರು.
Comments