ಕಾವೇರಿ ನೀರು ಹಂಚಿಕೆ : ಸುಪ್ರೀಂ ತೀರ್ಪಿನ ಬಗ್ಗೆ ಎಚ್ ಡಿಕೆ ಪ್ರತಿಕ್ರಿಯೆ
ಕಾವೇರಿ ತೀರ್ಪಿನ ವಿಷಯವನ್ನು ಜನರು ಸೂಕ್ಷ್ಮವಾಗಿ ಅರ್ಥೈಸಿಕೊಳ್ಳಬೇಕಿದೆ. ಈ ವಿಷಯದಲ್ಲಿ ಕಾಂಗ್ರೆಸ್ ದೊಡ್ಡ ಸಾಧನೆ ಮಾಡಿದವರಂತೆ ಬಿಂಬಿಸಿಕೊಳ್ಳುತ್ತಿತ್ತು. ಈಗ ಸುಪ್ರೀಂ ಕೋರ್ಟ್ ಈ ರೀತಿ ತೀರ್ಪು ನೀಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಜಿಲ್ಲೆಯ ಚಡಚಣದಲ್ಲಿ ಈ ಬಗ್ಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು, ಈ ತೀರ್ಪಿನ ಬಗ್ಗೆ ಚರ್ಚೆ ಮಾಡಲ್ಲ. ದೇವೇಗೌಡರು ಈ ವಿಷಯದಲ್ಲಿ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯರಿಂದ ನಾವು ಪಾಠ ಕಲಿಬೇಕಾಗಿಲ್ಲ. ಸಿಎಂ ಮುಸ್ಲಿಂರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಮುಸ್ಲಿಮರ ಬಗ್ಗೆ ಕಾಳಜಿಯಿಲ್ಲ. ಕಾಂಗ್ರೆಸ್‌ನ ಅಪಪ್ರಚಾರಕ್ಕೆ ಮುಸ್ಲಿಂ ಸಮುದಾಯ ಬಲಿಯಾಗಬಾರದು ಎಂದು ಹೇಳಿದರು. ಇನ್ನು ಈ ಬಾರಿ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ಬರಲ್ಲ. ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುತ್ತೆ ಎಂಬ ವಿಶ್ವಾಸವಿದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.
Comments