ಸೋಮವಾರ ದೊಡ್ಡಬಳ್ಳಾಪುರಕ್ಕೆ ರಾಹುಲ್ ಗಾಂದಿ, ಭಾರಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಭಾಷಣ
ದಿನಾಂಕ 7ರ ಸೋಮವಾರ ನಗರಕ್ಕೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂದಿ ಆಗಮಿಸಿ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಸಂಜೆ 4-3೦ಕ್ಕೆ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ ತಮ್ಮ ಪಕ್ಷದ ಅಭ್ಯರ್ಥಿ ಟಿ. ವೆಂಕಟರಮಣಯ್ಯ ಪರ ಮತಯಾಚಿಸಲಿದ್ದಾರೆ, ಇವರೊಂದಿಗೆ ಸನ್ಮಾನ್ಯ ಸಿದ್ದರಾಮಯ್ಯ, ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ ಶ್ರೀ ಜಿ. ಪರಮೇಶ್ವರ್, ಶ್ರೀ ಡಿ.ಕೆ.ಶಿವಕುಮಾರ್, ಮತ್ತು ರಾಜ್ಯ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಶ್ರೀ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ, ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಅಶೋಕ್ ಮತ್ತು ನಗರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯೋಗ ನಟರಾಜ್ ಕೋರಿದ್ದಾರೆ.
Comments