ಕಾಂಗ್ರೆಸ್ ನ ಮತ್ತೊಂದು ಪ್ರಭಾವಿ ವಿಕೆಟ್ ಜೆಡಿಎಸ್ ಪಾಲು...!!



ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯದ ರಾಗೇರುತ್ತಿದೆ. ಈ ಬಾರಿ ನಡೆಯಲಿರುವ ಚುನಾವಣೆ ಎಲ್ಲರಲೂ ಭಾರೀ ಕುತೂಹಲ ಮೂಡಿಸಿದೆ. ಅಲ್ಲದೆ ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪಣ ತೊಟ್ಟಿರುವ ಜೆಡಿಎಸ್ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.
ಎಲ್ಲೆಡೆ ಜೆಡಿಎಸ್ ವರ್ಚಸ್ಸು ರಾರಾಜಿಸುತ್ತಿರುವುದು ಕಂಡು ಬರುತ್ತಿದೆ, ಇದಕ್ಕೆ ಸಾಕ್ಷಿ ಸಮಾವೇಶಕ್ಕೆ ಹರಿದು ಬರುತ್ತಿರುವ ಜನಸಾಗರ ಎನ್ನಲಾಗಿದೆ. ಇನ್ನೂ ಜೆಡಿಎಸ್ ದಿನದಿಂದ ದಿನಕ್ಕೆ ಪ್ರಬಲವಾಗುತ್ತಿದೆ. ಹಲವು ಮುಖಂಡರು ಜೆಡಿಎಸ್ ಗೆ ಸೇರ್ಪಡೆಯಾಗುತ್ತಿದ್ದಾರೆ. ಹೀಗಾಗಿ ಜೆಡಿಎಸ್ ಎಲ್ಲೆಡೆ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಎರಡು ಮಾತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ವಿರಾಜಪೇಟೆ ಟಿಕೆಟ್ ಆಕಾಂಕ್ಷಿಯಾಗಿದ್ದ ಫಾರೆಸ್ಟ್ ಡೆವಲಪ್ಮೆಂಟ್ ಕಾರ್ಪೋರೇಷನ್ ಉಪಾಧ್ಯಕ್ಷೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ನಿಂದ ವಿರಾಜಪೇಟೆ ಟಿಕೆಟ್ ಆಕಾಂಕ್ಷಿಯಾಗಿದ್ದ ಪದ್ಮಿನಿ ಪೊನ್ನಪ್ಪ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾದ ಪದ್ಮಿನಿ ಪೊನ್ನಪ್ಪರಿಗೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿದ್ದಾರೆ.
Comments