ಸರ್ವೆ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಪ್ರಧಾನಿ ದೇವೇಗೌಡ್ರು…!!
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯದ ಕಾವು ಹೆಚ್ಚುತ್ತಿದೆ. ಈ ಬಾರಿ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷವೇ ಸರ್ಕಾರ ನಡೆಸಲಿದೆ. ಪಕ್ಷೇತರ ಅಭ್ಯರ್ಥಿಗಳು ಜೆಡಿಎಸ್ ಅನ್ನೇ ಬೆಂಬಲಿಸಲಿದ್ದಾರೆ" ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭವಿಷ್ಯ ವಾಣಿ ನುಡಿದ್ದಿದ್ದಾರೆ .
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,"ಇದುವರೆಗೂ ನಡೆದ ಸರ್ವೆಗಳಲ್ಲಿ ಜೆಡಿಎಸ್ ಗೆ ಉಳಿದೆರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಗಳಿಗಿಂತ ಕಡಿಮೆ ಸೀಟು ಬಂದಿದೆ. ಅದಕ್ಕೆ ಕಾರಣ ಸರ್ವೆಯನ್ನು ದುಡ್ಡು ಕೊಟ್ಟು ಮಾಡಿಸಿರುವುದು. ಹಣ ಕೊಟ್ಟವರ ಪರವಾಗಿ ಮಾಡುವ ಸರ್ವೆಗಳ ಬಗ್ಗೆ ನನಗೆ ನಂಬಿಕೆ ಇಲ್ಲ" ಎಂದಿದ್ದಾರೆ. ಜೆಡಿಎಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಪಕ್ಷೇತರರ ನೆರವಿನಿಂದ ಸರ್ಕಾರ ರಚಿಸಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಈ ಬಾರಿ 10 ರಿಂದ 12 ಪಕ್ಷೇತರು ಗೆಲುವು ಪಡೆಯುತ್ತಾರೆ. ಬಿಎಸ್ಪಿಗೆ 2-3 ಸ್ಥಾನಗಳು ಲಭಿಸಬಹುದು, ನನ್ನದೇ ಆದ ಲೆಕ್ಕಾಚಾರಗಳಿಲ್ಲದೇ ನಾನು ಮಾತನಾಡುವುದಿಲ್ಲ. ಪಕ್ಷೇತರರ ನೆರವಿನಿಂದ ಸರ್ಕಾರ ರಚಿಸಲಿದೆಎಂದು ಹೇಳಿದರು. ಹೈದರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟದಲ್ಲಿ ಎರಡು ದಿನ ಪ್ರವಾಸ ಮಾಡಿ ಬಂದಿದ್ದೇನೆ. ಆ ಭಾಗದ ಜನರು ಜೆಡಿಎಸ್ ಪರ ಒಲವು ತೋರಿದ್ದಾರೆ ಎಂದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾದರೂ ಜೆಡಿಎಸ್ ಅನ್ನು ಅಧಿಕಾರಕ್ಕೆ ತರಲೇಬೇಕೆಂದು ಆರೋಗ್ಯ ಲೆಕ್ಕಿಸದೆ ಪ್ರಚಾರ ನಡೆಸುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಒಬ್ಬರೇ ಪ್ರಚಾರ ನಡೆಸಿ ಗೆದ್ದು ಬರುತ್ತಾರೆ. ಅವರಿಗೆ ಆ ಸಾಮರ್ಥ್ಯವಿದೆ. ನಾವು ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುತ್ತೇವೆ ಎಂದರು. ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ರು ಭವಿಷ್ಯ ನುಡಿದ್ದಿದ್ದಾರೆ.
Comments