ಚುನಾವಣೆಗೂ ಮುನ್ನವೇ ‘ಕೈ’ ಪಕ್ಷಕ್ಕೆ ಭಾರೀ ಹಿನ್ನಡೆ…ಜೆಡಿಎಸ್ ಗೆ ಜಯ...!!
ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯದ ಕಾವು ಹೆಚ್ಚುತ್ತಿದೆ. ಅಲ್ಲದೆ ಪಕ್ಷಾಂತರ ಪರ್ವ ಹೆಚ್ಚುತ್ತಿದ್ದು, ಅನ್ಯ ಪಕ್ಷಗಳ ನಾಯಕರು ಜೆ ಡಿ ಎಸ್ ನತ್ತ ವಲಸೆ ಬರುತ್ತಿದ್ದಾರೆ. ಹೀಗಾಗಿ ಜೆಡಿಎಸ್ ದಿನದಿಂದ ದಿನಕ್ಕೆ ಪ್ರಬಲಗೊಳ್ಳುತ್ತಿದೆ.
ಮಾಜಿ ಸಚಿವ, ನಟ ರೆಬಲ್ ಸ್ಟಾರ್ ಅಂಬರೀಶ್ ಅವರು ಮೊನ್ನೆಯಷ್ಟೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ನಡುವೆ ಅಂಬರೀಶ್ ಕಾಂಗ್ರೆಸ್ ತೊರೆದು ಜೆಡಿಎಸ್ ಗೆ ಸೇರ್ಪಡೆಗೆ ಸಜ್ಜಾಗಿದ್ದಾರೆ ಎನ್ನಲಾಗುತ್ತಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಅಂಬರೀಶ್ ಬೆಂಬಲಿಗರು ಕುಮಾರಸ್ವಾಮಿಯನ್ನು ಭೇಟಿ ಮಾಡಲು ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಅಂಬರೀಶ್ ಆಪ್ತರಾದ ಮಂಡ್ಯ ನಗರಸಭೆ ಮಾಜಿ ಸದಸ್ಯ ರವಿಶಂಕರ್ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪುರುಷೋತ್ತಮ, ಜಗದೀಶ್, ನಗರ ಸಭೆ ನಾಮಿನಿ ಸದಸ್ಯ ಆನಂದ, ಚಂದ್ರಶೇಖರ್, ಭರತೇಶ್, ಸಾತನೂರು ಚಂದ್ರು ಸೇರಿದಂತೆ ಹಲವುರ ಕುಮಾರಸ್ವಾಮಿಯನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಇದು ಕಾಂಗ್ರೆಸ್ ಪಾಳಯಕ್ಕೆ ಮುಳುವಾಗಿದೆ. ಚುನಾವಣೆಗೂ ಮುನ್ನವೇ 'ಕೈ' ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆ ಅನುಸಾರ ಜೆಡಿಎಸ್ ಈ ಬಾರಿ ರಾಜ್ಯದೆಲ್ಲೆಡೆ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯುವುದರಲಿ ಎರಡು ಮಾತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
Comments