ನಾನು ಸಿಎಂ ಆಗಬೇಕೆಂದಿರುವುದು ಇದೇ ಕಾರಣಕ್ಕೆ, ಬಹಿರಂಗಪಡಿಸಿದ ಎಚ್’ಡಿಕೆ..!!

ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ರಾಜ್ಯಕೀಯ ಅಖಾಡ ರಂಗೇರುತ್ತಿದೆ. ವಿಧಾನಸಭಾ ಚುನಾವಣೆ ಮೇ 12ರಂದು ನಡೆಯಲಿದ್ದು, ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರವು ಮೇ 10ರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಚುನಾವಣಾ ಪ್ರಚಾರ ಕಾರ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕೂಡಾ ತೊಡಗಿಸಿಕೊಂಡಿದ್ದು, ಚುನಾವಣೆ ಗೆದ್ದು ಅಧಿಕಾರಕ್ಕೇರುವ ಭರವಸೆಯಲ್ಲಿದ್ದಾರೆ.
ಬೆಂಗಳೂರಿನ ಪದ್ಮನಾಭನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡ ಕುಮಾರಸ್ವಾಮಿ, ಬಿಜೆಪಿ ಶಾಸಕ ಆರ್ ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದರು. 'ಅಶೋಕ ಚಕ್ರವರ್ತಿ ಮೇಲೆ ಎಂದೂ ಐಟಿ ದಾಳಿ ನಡೆಯಲ್ಲ' ಎಂದು ಆರ್ ಅಶೋಕ್ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಅಷ್ಟೇ ಅಲ್ಲದೆ ತಾವು ಸಿಎಂ ಆಗಲು ಬಯಸಿರುವುದರ ಕಾರಣವನ್ನೂ ಬಹಿರಂಗಪಡಿಸಿದ್ದಾರೆ. 'ಎಲ್ಲರಿಗೂ ಸಮಾನ ಬದುಕು ಬೇಕಾಗಿದೆ. ಅಧಿಕಾರ ಮುಖ್ಯವಲ್ಲ. ಇದೇ ಕಾರಣಕ್ಕೆ ನಾನು ಮುಖ್ಯಮಂತ್ರಿಯಾಗಲು ಬಯಸಿರುವುದು' ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.
Comments