ಚಾಮುಂಡೇಶ್ವರಿಯಲ್ಲಿ ಮತ ಚಲಾಯಿಸಿದ ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ

ಕರ್ನಾಟಕ ವಿಧಾನಸಭೆ ಚುನಾವಣೆ ಈಗಾಗಲೇ ಆರಂಭಗೊಂಡಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಮತದಾರರು ಬೆಳಗ್ಗೆ 7 ರಿಂದಲೇ ಬಂದು ಮತ ಚಲಾಯಿಸುತ್ತಿದ್ದಾರೆ. ಈಗಾಗಲೇ ಮತದಾರರು ಸಾಲುಗಟ್ಟಿ ಮತದಾನ ಮಾಡಲು ಆರಂಭಿಸಿದ್ದಾರೆ.
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 7 ಗಂಟೆಗೆ ಮತದಾನ ಆರಂಭವಾಗಿದೆ. ರಣಕಣದಲ್ಲಿ ಮುಂಜಾನೆಯೇ ಮತದಾನ ಮಾಡಲು ಹುರಿಯಾಳು ಜಿ.ಟಿ. ದೇವೇಗೌಡ ಆಗಮಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿಯೂ ಆಗಿರುವ ಶಾಸಕ ಜಿ.ಟಿ. ದೇವೇಗೌಡ ಅವರು ಸ್ವಗ್ರಾಮ ಗುಂಗ್ರಾಲ್ ಛತ್ರ ಗ್ರಾಮದಲ್ಲಿ ಮತದಾನ ಮಾಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. ಪತ್ನಿ ಹಾಗೂ ಸೊಸೆಯೊಂದಿಗೆ ಬಂದು ಮತ ಚಲಾಯಿಸಿದ್ದಾರೆ.
Comments