ಮತದಾನಕ್ಕೂ ಮುನ್ನ ದೇವರ ಮೊರೆ ಹೋದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕು ಮುನ್ನ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇವರ ಮೊರೆ ಹೋಗಿದ್ದು, ಹೊಳೆನರಸೀಪುರದ ಮನೆಯಲ್ಲಿ ಪೂಜೆ ಸಲ್ಲಿಸಿದ್ದಾರೆ.
ಹೊಳೆನರಸೀಪುರದ ಲಕ್ಷ್ಮೀ ನರಸಿಂಹ ದೇವಾಲಯ ಸೇರಿದಂತೆ ಅನೇಕ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಸಿ ವಿಜಯಲಕ್ಷ್ಮಿ ಒಲಿಯುವಂತೆ ಪಾರ್ಥಿಸಿದ್ದಾರೆ. ಹರದಹಳ್ಳಿಯ ದೇವಾಲಯದಲ್ಲೂ ಪೂಜೆ ಸಲ್ಲಿಸಿರುವ ದೇವೇಗೌಡರು ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯುವುದು ವಿಶ್ವಾಸ ಹೊಂದಿದ್ದು, ಇಂದು ಮತದಾರರ ನಿರ್ಧಾರ ಅಂತಿಮವಾಗಲಿದೆ. ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಕುಟುಂಬ ಸಮೇತ ಮತದಾನ ಮಾಡಲಿದ್ದಾರೆ.
Comments