ಚುನಾವಣೋತ್ತರ ಸಮೀಕ್ಷೆ ಬಹಿರಂಗ: 'ಕೈ - ಕಮಲ'ಕ್ಕಿಲ್ಲ ಬಹುಮತ; ಜೆಡಿಎಸ್ 'ಕಿಂಗ್'

ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಅಲ್ಲಲ್ಲಿ ಮಳೆ ಅಡಚಣೆ, ಮತಯಂತ್ರ ತೊಂದರೆ ಹೊರತುಪಡಿಸಿದಂತೆ ಶೇ.70ರಷ್ಟು ಮತದಾನವಾಗಿದೆ.
ಶನಿವಾರದಂದು ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರದಲ್ಲಿ ಭದ್ರವಾಗಿದೆ. ಮೇ 15 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಂದಿನ ಐದು ವರ್ಷಗಳ ಕಾಲ ರಾಜ್ಯವನ್ನು ಆಳುವ ಸರ್ಕಾರದ ಸ್ಪಷ್ಟ ಚಿತ್ರಣ ಸಿಗಲಿದೆ. ಮತದಾನ ಮುಕ್ತಾಯವಾಗುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಬಿಡುಗಡೆಯಾಗಿದ್ದು, ಬಲ್ಲ ಮೂಲಗಳ ಪ್ರಕಾರ ಈ ಸಮೀಕ್ಷಗಳು ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಪರ ತಮ್ಮದೇ ಆದ ರೀತಿಯಲ್ಲಿ ಬ್ಯಾಟ್ ಬೀಸಿವೆ. ಈಗ ಹೊರ ಬಿದ್ದಿರುವ ಮತದಾನೋತ್ತರ ಸಮೀಕ್ಷೆಗಳು ಸಮ್ಮಿಶ್ರ ಸರ್ಕಾರದ ಸಾಧ್ಯತೆಯನ್ನು ಹೇಳಿರುವುದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರನ್ನು ಒಳಗೊಳಗೆ ಆತಂಕಕ್ಕೀಡು ಮಾಡಿರುವುದು ಸುಳ್ಳಲ್ಲ. ಜೆಡಿಎಸ್ ‘ಕಿಂಗ್’ ಆಗಲಿದೆ. ರಾಷ್ಟ್ರೀಯ ಪಕ್ಷಗಳ ನಾಯಕರಲ್ಲಿ ಕಳವಳದಲ್ಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಆಟ ಈಗ ಶುರುವಾಗಿದೆ ಎಂದು ಮೂಲಗಳು ತಿಳಿಸಿವೆ.
Comments