ಚುನಾವಣೋತ್ತರ ಸಮೀಕ್ಷೆ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದೇನು?
ಶನಿವಾರದಂದು ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರದಲ್ಲಿ ಭದ್ರವಾಗಿದೆ. ಮೇ 15 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಂದಿನ ಐದು ವರ್ಷಗಳ ಕಾಲ ರಾಜ್ಯವನ್ನು ಆಳುವ ಸರ್ಕಾರದ ಸ್ಪಷ್ಟ ಚಿತ್ರಣ ಸಿಗಲಿದೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಜೆಡಿಎಸ್ ‘ಕಿಂಗ್ ಮೇಕರ್’ ಆದ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ರೀತಿ ಪ್ರತಿಕ್ರಿಯಿಸಿದರು. "ಯಾವುದನ್ನೂ 'ಸ್ವೀಕರಿಸಲು' ಅಥವಾ 'ತಿರಸ್ಕರಿಸಲು' ನಾನು ತಯಾರಾಗಿಲ್ಲ. ಮತ ಎಣಿಕೆ ನಡೆಯುವ ಮೇ 15ರವರೆಗೆ ಕಾದು ನೋಡೋಣ" ಎಂದರು. ರಾಜ್ಯದಲ್ಲಿ ಜೆಡಿಎಸ್ ಅಧಿಕಾರ ಹಿಡಿಯಲಿದೆ ಎಂದು ನಿನ್ನೆ ಮತ ಚಲಾಯಿಸಿದ ಬಳಿಕ ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದರು.
Comments