ಏಳು ಬಂಡಾಯ ಶಾಸಕರ ವಿರುದ್ಧ ಚುನಾವಣಾ ಭವಿಷ್ಯ ಬಿಚ್ಚಿಟ್ಟ ಎಚ್'ಡಿಕೆ

14 May 2018 5:51 PM |
29171 Report

ಚನ್ನಪಟ್ಟಣ ಹಾಗೂ ರಾಮನಗರ ಕ್ಷೇತ್ರಗಳು ನನ್ನ ಎರಡು ಕಣ್ಣು ಇದ್ದ ಹಾಗೆ. ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇನೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ನಮ್ಮದೇ ಸರ್ಕಾರ ರಚನೆಯಾಗುವ ವಿಶ್ವಾಸವಿದೆ. ಎರಡು ಕಡೆ ನಾನೇ ಪ್ರತಿನಿಧಿಯಾಗಿದ್ದುಕೊಂಡು ಸಮಗ್ರ ಅಭಿವೃದ್ಧಿ ಪಡಿಸುತ್ತೇನೆ. ಕುಮಾರಸ್ವಾಮಿ ಕೆರೆ–ಕಟ್ಟೆಗಳನ್ನು ತುಂಬಿಸಲಿಲ್ಲ ಎಂದು ಕೆಲವರು ಆರೋಪ ಮಾಡುತ್ತಾರೆ. ಇವತ್ತು ಕಾವೇರಿ ನೀರು ಹಂಚಿಕೆ ತೀರ್ಪಿನ ಹಿನ್ನೆಲೆಯಲ್ಲಿ ಯಾವ ರೀತಿ ನೀರು ತರಬೇಕು. ಶುದ್ಧ ನೀರು ಘಟಕಗಳನ್ನು ಸ್ಥಾಪಿಸಬೇಕು. ಯುವಕರಿಗೆ ಉದ್ಯೋಗ ಒದಗಿಸಬೇಕು. ಪ್ರಣಾಳಿಕೆಯಲ್ಲಿ ಘೋಷಿಸಿದ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು ಎಂದು ಯೋಜಿಸಿದ್ದೇನೆ’ ಎಂದರು. ಕಾಂಗ್ರೆಸ್‌ ಹಾಗೂ ಬಿಜೆಪಿ ಮುಖಂಡರು ಜೆಡಿಎಸ್‌ನ ಪ್ರಣಾಳಿಕೆ ನೋಡಿ ಈಗಾಗಲೇ ಸುಸ್ತಾಗಿದ್ದಾರೆ. ನನ್ನ ಪ್ರೀತಿ ಮತ್ತು ಸರಳತೆಯೇ ಗೆಲುವಿಗೆ ಪ್ರಮುಖ ಕಾರಣವಾಗಲಿದೆ’ ಎಂದರು. ರಾಮನಗರ -ಚನ್ನಪಟ್ಟಣ ಎರಡೂ ಕ್ಷೇತ್ರದಲ್ಲೂ ನಾನೇ ಗೆಲ್ಲುತ್ತೇನೆ. ಬಂಡಾಯ ಶಾಸಕರ ಏಳೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

Edited By

Shruthi G

Reported By

hdk fans

Comments