ಜೆಡಿಎಸ್ 'ಕಿಂಗ್' ಕುಮಾರಣ್ಣ ನಿಗೆ ಸಿಎಂ ಪಟ್ಟ..!!
ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಯಾವುದೇ ಪಕ್ಷಕ್ಕೂಸ್ಪಷ್ಟ ಬಹುಮತ ಕೊಡದ ರಾಜ್ಯದ ಜನ ಅತಂತ್ರ ಫಲಿತಾಂಶ ನೀಡಿದ್ದಾರೆ. ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದ ಹಿನ್ನೆಲೆಯಲ್ಲಿ ಮೈತ್ರಿ ಕಸರತ್ತು ರಾಜ್ಯದಲ್ಲಿ ಮುಂದುವರಿದಿದೆ.
ಫಲಿತಾಂಶ ಹೊರಬೀಳುತ್ತಿದ್ದಂತೆ ಸರ್ಕಾರ ರಚನೆ ಮಾಡಲು ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಕಸರತ್ತನ್ನು ತೀವ್ರಗೊಳಿಸಿವೆ. ಪಕ್ಷೇತರರ ಬೆಂಬಲ ಪಡೆದರೂ ಬಿಜೆಪಿಗೆ ಸರ್ಕಾರ ರಚನೆ ಮಾಡುವಷ್ಟು ಬಹುಮತ ಸಿಗುವುದಿಲ್ಲ. ಜೆಡಿಎಸ್ ಬೆಂಬಲ ಪಡೆಯುವುದು ಅನಿವಾರ್ಯವಾಗಿದೆ. ಕಾಂಗ್ರೆಸ್‍ನಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಕಾಂಗ್ರೆಸ್, ಜೆಡಿಎಸ್, ಪಕ್ಷೇತರರ ನೆರವಿನೊಂದಿಗೆ ಸರ್ಕಾರ ರಚಿಸಲು ಪ್ರಯತ್ನಗಳು ನಡೆದಿವೆ. ಜೆಡಿಎಸ್‍ಗೆ ಅಧಿಕಾರ ಬಿಟ್ಟುಕೊಡಲು ಕಾಂಗ್ರೆಸ್ ಈಗಾಗಲೇ ತೀರ್ಮಾನಿಸಿದ್ದು, ಕುಮಾರಸ್ವಾಮಿಗೆ ಮುಖ್ಯಮಂತ್ರಿ ಪಟ್ಟ ನೀಡಿಯಾದರೂ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂಬುದು ಕಾಂಗ್ರೆಸ್ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್, ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಲು ನಿರ್ಧರಿಸಿದೆ.
Comments