ಹುಣಸೂರು ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ ಜೆಡಿಎಸ್ ಅಭ್ಯರ್ಥಿ ಎಚ್.ವಿಶ್ವನಾಥ್...!!
ಈ ಬಾರಿ ರಾಜ್ಯ ವಿಧಾನಸಭಾ ಚುನಾವಾಣಿ ಬಾರಿ ಕುತೂಹಲ ಕೆರಳಿಸಿದ್ದು, ಇದೀಗ ಚುನಾವಣಾ ಫಲಿತಾಂಶವು ಹೊರಬಿದ್ದಿದೆ ನಾನು ದೇವರಾಜ ಅರಸು ಅವರ ಕರ್ಮ ಭೂಮಿಯಾದ ಹುಣಸೂರು ಕ್ಷೇತ್ರದಲ್ಲಿ ಯಲ್ಲಿ ಗೆದ್ದಿದ್ದೇನೆ. ನನ್ನ ಗೆಲುವಿಗೆ ಕಾರಣರಾದ ಹುಣಸೂರು ಜನತೆಗೆ ಧನ್ಯವಾದಗಳು ಎಂದು ಎಚ್.ವಿಶ್ವನಾಥ್ ಹೇಳಿದ್ದಾರೆ.
ನಾನು ಗೆಲ್ಲಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಶ್ರಮ ಹೆಚ್ಚಿದೆ. ನಾನು ಬಿಎಸ್ ಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ. ಕಾಂಗ್ರೆಸ್‌ನಲ್ಲಿದ್ದ ನನ್ನನ್ನು ಜೆಡಿಎಸ್‌ಗೆ ಕರೆತಂದವರು ಮಾಜಿ ಶಾಸಕ ದಿ. ಚಿಕ್ಕಮಾದು ಅವರು. ಅವರನ್ನು ಈ ಸಮಯದಲ್ಲಿ ನಾನು ಸ್ಮರಿಸಿಕೊಳ್ಳುತ್ತೇನೆ. ಹುಣಸೂರಿನಲ್ಲಿ ಎಲ್ಲರನ್ನೂ ಗಣನೆಗೆ ತೆಗೆದುಕೊಂಡು ಕೆಲಸ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಹುಣಸೂರು ಕ್ಷೇತ್ರದಲ್ಲಿ ನಡೆದ ಚುನಾವಣೆಯಲ್ಲಿ ಎಚ್. ವಿಶ್ವನಾಥ್ ಅವರು 91667 ಸಾವಿರ ಮತಗಳನ್ನು ಗಳಿಸಿ ಕಾಂಗ್ರೆಸ್‌ನ ಎಚ್.ಪಿ. ಮಂಜುನಾಥ್ ಅವರ ವಿರುದ್ಧ 8,575 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
Comments