86ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ದೊಡ್ಡಗೌಡರಿಗೆ ಸಿಗಲಿದ್ಯಾ ಸಿಹಿ..!!



ಮಾಜಿ ಪ್ರಧಾನಮಂತ್ರಿ 86ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬ ಹಿನ್ನಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕುಟುಂಬ ಸಮೇತರಾಗಿ ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ದೊರೆಯದ ಕಾರಣ ಕಾಂಗ್ರೆಸ್, ಜೆಡಿಎಸ್ ಗೆ ತನ್ನ ಬೆಂಬಲ ನೀಡಿರುವ ಹಿನ್ನಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್..ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವ ಸಾಧ್ಯತೆಯಿತ್ತಾದರೂ ರಾಜ್ಯಪಾಲರು ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನಿಸಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನಲೆಯಲ್ಲಿ ಗುರುವಾರದಂದು ವಿಧಾನಸಭೆ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರೊಂದಿಗೆ ಪ್ರತಿಭಟನೆ ನಡೆಸಿದ್ದ ದೇವೇಗೌಡರು ಹುಟ್ಟುಹಬ್ಬದ ಹಿನ್ನಲೆಯಲ್ಲಿ ತಿರುಪತಿಗೆ ತೆರಳಿದ್ದು, ಅವರಿಗೆ ಇಂದು ಸಿಹಿ ಸುದ್ದಿ ಸಿಗಲಿದೆಯಾ ಎಂಬ ಕುತೂಹಲ ಮೂಡಿದೆ. ರಾಜ್ಯಪಾಲ ವಜೂಭಾಯ್ ವಾಲಾರ ತೀರ್ಮಾನ ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಅದರ ವಿಚಾರಣೆ ಇಂದು ಬೆಳಿಗ್ಗೆ ನಡೆಯಲಿದೆ. ರಾಜ್ಯಪಾಲರ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿಯುತ್ತಾ ಅಥವಾ ಕಾಂಗ್ರೆಸ್ ಹಾಗೂ ಜೆಡಿಎಸ್ ವಾದವನ್ನು ಪುರಸ್ಕರಿಸುವ ಮೂಲಕ ಜೆಡಿಎಸ್, ಅಧಿಕಾರದ ಗದ್ದುಗೆಗೇರಲು ಹಾದಿ ಸುಗಮಗೊಳಿಸುತ್ತಾ ಎಂಬುದನ್ನು ಕಾದುನೋಡಬೇಕಿದೆ.
Comments