ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು; ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಎಚ್ ಡಿಕೆ
ನಾಳೆ ಸಂಜೆ 4ಗಂಟೆಗೆ ಸದನಲ್ಲಿ ತಮ್ಮ ಪಕ್ಷ ಬಹುಮತ ಸಾಬೀತು ಪಡಿಸುವಂತೆ ಸುಪ್ರಿಂ ಹೇಳಿರುವ ಹಿನ್ನಲ್ಲೆಯಲ್ಲಿ ರಾಜ್ಯ ಬಿಜೆಪಿ ನಾಯಕರುಗಳು ಸಿಕ್ಕಾಪಟ್ಟೆ ತಲೆ ಬಿಸಿ ಮಾಡಿಕೊಂಡು ಓಡಾಡುತ್ತಿದ್ದಾರೆ. ಈ ನಡುವೆ ಬಿಜೆಪಿ ಬಹುಮತ ಸಾಬೀತುಪಡಿಸುವ ಬಗ್ಗೆ ಬೆಂಗಳೂರಿನಲ್ಲಿ ಮಾತನಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಬಿಜೆಪಿಯ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸೋಲಲ್ಲಿದ್ದಾರೆ ಎಂದು ಭವಿಷ್ಯ ನುಡಿದ್ದಿದ್ದಾರೆ.
ಇದೇ ವೇಳೆ ಅವರು ಮಾತನಾಡಿ ಬಿಜೆಪಿ ಸಂಸದ ಶೋಭಾ ಕರಂದ್ಲಾಜೆ ಅವರ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ನಮ್ಮವರು 14 ಜನ ಬಿಜೆಪಿ ಜತೆ ಇದ್ದರೆ, ನನ್ನ ಜತೆ ಬಿಜೆಪಿಯ 28 ಶಾಸಕರಿದ್ದಾರೆ ಎಂದು ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
Comments