ಶ್ರೀರಾಮುಲು ಹೇಳಿಕೆಗೆ ತಿರುಗೇಟು ಕೊಟ್ಟ ಜೆಡಿಎಸ್ ದಳಪತಿ ಕುಮಾರಣ್ಣ
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿರುವ ಎಚ್.ಡಿ. ಕುಮಾರಸ್ವಾಮಿ ಅವರು, ಆ ದಿನದಂದು ರೇಷ್ಮೆಯ ಉಡುಪು ಧರಿಸಿರಲಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜೆ ಡಿ ಎ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, ಇದು ತಾತ್ಕಾಲಿಕ ಸರ್ಕಾರವಲ್ಲ. ಐದು ವರ್ಷ ಸುಭದ್ರ ಆಡಳಿತ ನೀಡುವ ಗುರಿ ಹೊಂದಿದ್ದೇನೆ. ಉತ್ತಮ ಆಡಳಿತ ನೀಡುವ ಜವಾಬ್ದಾರಿ ನನ್ನ ಮೇಲಿದೆ. ಈ ಬಾರಿ ಸಮ್ಮಿಶ್ರ ಸರ್ಕಾರವನ್ನು ನಿಭಾಯಿಸುವುದು ದೊಡ್ಡ ಸವಾಲು. ಇದಕ್ಕೆ ಎಲ್ಲರ ಸಹಕಾರ ಅಗತ್ಯ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ. ಕುಮಾರಸ್ವಾಮಿ ಅವರು ನಿದ್ದೆ ಮಾಡಲು ನಾವು ಬಿಡುವುದಿಲ್ಲ ಎಂಬ ಶ್ರೀರಾಮುಲು ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್’ಡಿಕೆ ಈ ರೀತಿ ತಿರುಗೇಟು ಕೊಟ್ಟಿದಾರೆ . ನನ್ನ ನಿದ್ದೆಗೆಡಿಸಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ನಿದ್ದೆಗೆಡುವಂತೆ ನಾನು ಮಾಡುತ್ತೇನೆ ಎಂದ ಅವರು ಪ್ರತಿಯೊಬ್ಬರ ಅಭಿಪ್ರಾಯಗಳನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ನನ್ನ ನಿದ್ದೆಗೆಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲವೂ ಮಾಧ್ಯಮಗಳ ಸೃಷ್ಟಿ. ಸಾಮಾಜಿಕ ಜಾಲತಾಣ, ಪತ್ರಿಕೆಗಳಲ್ಲಿ ಬರುವ ಬರಹಗಳನ್ನು ಓದಿ ಮೆದುಳಿನಲ್ಲಿ ತುಂಬಿಸಿಕೊಂಡಿದ್ದೇನೆ. ಅದಕ್ಕೆ ಸೂಕ್ತ ಉತ್ತರವನ್ನು ಮುಂದಿನ ದಿನಗಳಲ್ಲಿ ನೀಡುತ್ತೇನೆ ಎಂದು ಹೇಳಿದರು. ದೆಹಲಿಗೆ ತೆರಳಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರೊಂದಿಗೆ ಚರ್ಚಿಸಲಿದ್ದೇನೆ. ಬಿಎಸ್‌ಪಿ ನಾಯಕಿ ಮಾಯಾವತಿ ಅವರನ್ನೂ ಭೇಟಿ ಮಾಡಲಿದ್ದೇನೆ ಎಂದರು. ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪತ್ನಿ ಅನಿತಾ ಅವರೊಂದಿಗೆ ಹಾಸನದ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಹೊಳೆ ನರಸೀಪುರದ ಲಕ್ಷ್ಮಿ ನರಸಿಂಹ ದೇವಸ್ಥಾನ, ಹರದನಹಳ್ಳಿಯ ಶಿವ ದೇವಸ್ಥಾನ ಸೇರಿದಂತೆ ವಿವಿಧೆಡೆ ಅವರು ಪೂಜೆ ಸಲ್ಲಿಸಿದರು. ಹೊಳೆನರಸೀಪುರದ ಹೆಲಿಪ್ಯಾಡ್‌ನಲ್ಲಿ ಪತ್ನಿ ಸಮೇತ ಬಂದಿಳಿದ ಕುಮಾರಸ್ವಾಮಿ ಅವರನ್ನು ಸಹೋದರ ಎಚ್.ಡಿ. ರೇವಣ್ಣ ಬೆಂಬಲಿಗರೊಂದಿಗೆ ಸ್ವಾಗತಿಸಿದರು.
Comments