ರಾಮನಗರದಿಂದ ಕಣಕ್ಕಿಳಿಯಲು ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರ ಸ್ವಾಮಿ ಬಹುತೇಕ ಖಚಿತ..!
ರಾಜ್ಯ ವಿಧಾನಸಭಾ ಚುನಾವಣೆಗೆ ಈಗ ತೆರೆ ಬಿದ್ದಿದ್ದೆ. ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ? ಈ ಸುದ್ದಿಯು ಬಹುತೇಕವಾಗಿ ಖಚಿತವಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಿಂದಲೂ ಕೂಡ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಯೋಜಿತ ಮುಖ್ಯಮಂತ್ರಿಯಾದ ಎಚ್ ಡಿ ಕುಮಾರಸ್ವಾಮಿ, ಎರಡೂ ಕ್ಷೇತ್ರಗಳಿಂದಲೂ ಕೂಡ ಜಯ ಗಳಿಸಿದ್ದರು. ಎರಡರಲ್ಲಿ ಒಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕಾಗಿರುವುದರಿಂದ ಅವರು ಚನ್ನಪಟ್ಟಣವನ್ನು ತಮ್ಮ ತೆಕ್ಕೆಯಲ್ಲಿ ಇರಿಸಿಕೊಂಡು ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟರು. ಇದೀಗ ಈ ಕ್ಷೇತ್ರದಿಂದ ಗೆಲ್ಲುವ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕಿದೆ. ಈಗಾಗಲೇ ರಾಮನಗರ, ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉತ್ತಮ ಜನಪ್ರಿಯತೆ ಹೊಂದಿರುವ ಎಚ್ ಡಿ ಕೆ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನೇ, ಜೆಡಿಎಸ್ ಪಕ್ಷ ತನ್ನ ರಾಮನಗರ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆಗಳು ಹೆಚ್ಚಾಗಿವೆ.
Comments