ಎಚ್.ಡಿ.ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರಕ್ಕೆ ವೇದಿಕೆ ಸಜ್ಜು..!!

23 May 2018 9:41 AM |
1486 Report

ವಿಧಾನಸಬಾ ಚುನಾವಣೆಯಲ್ಲಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿ ಸರ್ಕಾರ ರಚಿಸಿದರೂ ಬಹುಮತ ಸಾಬೀತು ಪಡಿಸುವಲ್ಲಿ ವಿಫಲರಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ನಾಲ್ಕೇ ದಿನದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತಿದೆ.

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರು ಇಂದು ಸಂಜೆ 4.30ಕ್ಕೆ ಬೆಂಗಳೂರಿನ ಶಕ್ತಿಸೌಧ ವಿಧಾನಸೌಧದ ಎದರು ಪ್ರಮಾಣವಚ ಸ್ವೀಕರಿಸುತ್ತಿದ್ದಾರೆ. 10 ವರ್ಷಗಳ ಬಳಿಕ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಮರಳುತ್ತಿದೆ. ಕುಮಾರಸ್ವಾಮಿಯವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರೂ ಕೂಡ ಸಂಪುಟ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಉಪಮುಖ್ಯಮಂತ್ರಿಯಾಗುವ ಅವರ ಬಹುದಿನಗಳ ಕನಸು ಇಂದು ನನಸಾಗಲಿದೆ.

 

Edited By

Shruthi G

Reported By

hdk fans

Comments