ಭೀಕರ ರಸ್ತೆ ಅಪಘಾತದಲ್ಲಿ ನಿರೂಪಕ ಚಂದನ್ ಸಾವು
ಖಾಸಗಿ ವಾಹಿನಿಯಲ್ಲಿ ನಿರೂಪಕರಾಗಿದ್ದ ಚಂದನ್ [ಚಂದ್ರಶೇಖರ್ ] ದಾವಣಗೆರೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಚಂದನ್ ಹಾಗೂ ಸಹ ಗಾಯಕಿ ಸಂತೋಷಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದಾ ಹಸನ್ಮುಖಿಯಾಗಿರುತ್ತಿದ್ದ ಚಂದನ್ ಉದಯ ಮ್ಯೂಸಿಕ್, ಕಸ್ತೂರಿ ಸೇರಿದಂತೆ ವಿವಿಧ ಖಾಸಗಿ ವಾಹಿನಿಗಳಲ್ಲಿ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದರು. ಅತ್ಯಂತ ಸುಲಲಿತವಾಗಿ ಕನ್ನಡ ಮಾತನಾಡುತ್ತಿದ್ದ ಚಂದನ್ ಕರ್ನಾಟಕದಾದ್ಯಂತ ಮನೆ ಮಾತಾಗಿದ್ದರು. ದಾವಣಗೆರೆಯ ಹನಗವಾಡಿಯ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತವಾಗಿದೆ. ಬೆಂಗಳೂರು ಕಡೆಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ವೇಳೆ ರಸ್ತೆ ಪಕ್ಕಕ್ಕೆ ನಿಂತ ಲಾರಿಗೆ ಕಾರ್ ಡಿಕ್ಕಿ ಸಂಭವಿಸಿದೆ. ಮೃತ ಚಂದನ್ ಪತ್ನಿ ಮತ್ತು ಇಬ್ಬರು ಮಕ್ಕಳು, ಅಪಾರ ಸಂಖ್ಯೆಯ ಸ್ನೇಹಿತರನ್ನು ಅಗಲಿದ್ದಾರೆ,
Comments