ಫ್ಲ್ಯಾಶ್ ನ್ಯೂಸ್ : ಸರ್ಕಾರ ಎಷ್ಟು ದಿನ ಉಳಿಯುತ್ತೆ..!ನೂತನ ಸಿಎಂ ಎಚ್'ಡಿಕೆ ಹೇಳಿದ್ದೇನು?

ನನ್ನ ನಾಯಕತ್ವದ ಸಮ್ಮಿಶ್ರ ಸರ್ಕಾರ ಇಂದಿನಿಂದ ಅಸ್ತಿತ್ವಕ್ಕೆ ಬಂದಿದೆ. ಈ ಸರ್ಕಾರ ಉಳಿಯುತ್ತಾ ಎಂಬುದು ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ. ಇದರಲ್ಲಿ ಯಾವ ಅನುಮಾನವೂ ಬೇಡ ಎಂದು ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಹೆಚ್ ಡಿ ಕುಮಾರಸ್ವಾಮಿ, 'ಈ ಸರ್ಕಾರ ಉಳಿಯುತ್ತಾ ಎಂಬುದು ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆ. ಇದರಲ್ಲಿ ಯಾವ ಅನುಮಾನವೂ ಬೇಡ. ನಮ್ಮದು ಸುಭದ್ರ ಸರ್ಕಾರವಾಗಿರಲಿದೆ. ದೇಶದ ಹಿತದೃಷ್ಟಿ ಕಾಪಾಡಲು ಸಮ್ಮಿಶ್ರ ಸರ್ಕಾರ ಬೇಕು ಎಂದರು. ವಿಧಾನಸಭೆಯಲ್ಲಿ ಮೇ 25ರಂದು ವಿಶ್ವಾಸಮತ ಯಾಚನೆ ನಡೆಯಲಿದೆ. ಬಳಿಕ ಮುಂದಿನ ನಡೆ ಬಗ್ಗೆ ವಿವರ ನೀಡುವುದಾಗಿ' ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
Comments