ಪ್ರತಿದಿನ ಒಂದು ಗಂಟೆ ಜನತಾದರ್ಶನ ಮಾಡಲಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ

ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಲಿದ್ದಾರೆ. ಹಳ್ಳಿಯಿಂದಲೇ ಸರ್ಕಾರ ನಡೆಸುತ್ತೇನೆ ಎಂದು ಚುನಾವಣಾ ಪ್ರಚಾರದ ವೇಳೆ ಹೇಳಿದ್ದ ಮುಖ್ಯಮಂತ್ರಿ ಎಚ್. ಡಿ. ಕುಮರಸ್ವಾಮಿ ಅವರು, ಬೆಂಗಳೂರಿನಲ್ಲಿರುವ ದಿನಗಳಂದು ಮುಖ್ಯಮಂತ್ರಿ ಪ್ರತಿ ದಿನ ಬೆಳಗ್ಗೆ 10 ರಿಂದ 11 ಗಂಟೆವರೆಗೆ ಸಾರ್ವಜನಿಕರು ಹಾಗೂ ಗಣ್ಯರ ಭೇಟಿಗೆ ಲಭ್ಯವಿರುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಜೆ.ಪಿ.ನಗರದಲ್ಲಿರುವ ಖಾಸಗಿ ನಿವಾಸದಲ್ಲಿ ಸಾರ್ವಜನಿಕರ ಭೇಟಿಯಿಂದಾಗಿ ಜನದಟ್ಟಣೆ ಉಂಟಾಗಿ ಬಡಾವಣೆಯ ಇತರೆ ನಿವಾಸಿಗಳಿಗೆ ಅಡಚಣೆಯಾಗಲಿದೆ. ಹೀಗಾಗಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲೇ ಸಾರ್ವಜನಿಕರ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Comments