ರೈತರ ಸಾಲ ಮನ್ನಾ ಕುರಿತು ಮುಖ್ಯಮಂತ್ರಿ ಎಚ್'ಡಿಕೆ ಹೊಸ ಐಡಿಯಾ...!!
ನಿನ್ನೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎಚ್.ಡಿ.ಕುಮಾರಸ್ವಾಮಿಯವರು ಸಿಎಂ ಆಗಿ ತಮ್ಮ ಮೊದಲ ಸುದ್ದಿಗೋಷ್ಠಿಯನ್ನು ನಡೆಸಿದರು. ಸಾಲ ಮನ್ನಾ ಮಾಡಬೇಕು ಎಂಬ ವಿಚಾರದಲ್ಲಿ ಹಿಂದಕ್ಕೆ ಸರಿಯಲ್ಲ, ರೈತರ ಸಾಲ ಮನ್ನಾ ವಿಚಾರದಲ್ಲಿ ಕೆಲವು ಆರ್ಥಿಕ ತಜ್ಞರು ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಗಮನಿಸಿದ್ದೇನೆ. ಅವರ ಲೆಕ್ಕಾಚಾರವೇ ಬೇರೆ, ನಾವು ರಾಜಕೀಯವಾಗಿ ಆಲೋಚಿಸುವುದು ಬೇರೆ ಎಂದರು. ಆದ್ರೆ ಸಮ್ಮಿಶ್ರ ಸರ್ಕಾರವಾಗಿದ್ದರಿಂದ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಹತ್ತು ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು..ಪ್ರಮುಖವಾಗಿ ಸಾಲ ಮನ್ನಾ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಾಲ ಮನ್ನಾ ಮಾಡುವ ಬಗ್ಗೆ ತಮ್ಮ ಬಳಿ ಬ್ಲೂ ಪ್ರಿಂಟ್ ರೆಡಿ ಇದೆ ಎಂದು ಭರವಸೆ ಮೂಡಿಸಿದ್ದಾರೆ.. ರಾಜ್ಯ ಸರಕಾರದ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿತಿಯಲ್ಲಿಟ್ಟು ರೈತರ 53 ಸಾವಿರ ಕೋಟಿ ರೂ.ಸಾಲ ಮನ್ನಾ ಮಾಡಬೇಕು ಎಂಬ ವಿಚಾರದಲ್ಲಿ ಹಿಂದಕ್ಕೆ ಸರಿಯದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುತ್ತೇನೆ ಈ ವಿಚಾರದಲ್ಲಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ರೈತರ ಸಾಲ ಮನ್ನಾ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ಕುಮಾರಸ್ವಾಮಿ ಯೂಟರ್ನ್ ಎಂದು ಬಿಂಬಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ರೈತರ ಸಾಲ ಮನ್ನಾ ಮಾಡದಿದ್ದರೆ ರೈತರನ್ನು ದಂಗೆ ಎಬ್ಬಿಸಿ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ರಾಜ್ಯದ ಯಾರೊಬ್ಬರೂ ಬೀದಿಗಿಳಿದು ಪ್ರತಿಭಟನೆ ನಡೆಸುವಂತಹ ಅಸ್ತ್ರ ನೀಡುವುದಿಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.
ರಾಜ್ಯದಲ್ಲಿ ವಿಚಿತ್ರ ಪರಿಸ್ಥಿತಿ ಉದ್ಭವಾಗಿದೆ. ಜನಸಾಮಾನ್ಯರಲ್ಲಿ ಈ ರಾಜಕೀಯ ಮೈತ್ರಿ ಕುರಿತು ಪರ-ವಿರೋಧ ಮಾತನಾಡುವವರು ಇದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿರುವ ಪ್ರತಿಕ್ರಿಯೆಗಳನ್ನು ಗಮನಿಸಿದ್ದೇನೆ. ಈ ಹೊಂದಾಣಿಕೆ ಒಂದು ವರ್ಗದ ಜನರಲ್ಲಿ ಮೂಡಿಸಿರುವ ಅನುಮಾನಗಳು ತಪ್ಪು ಎಂಬುದನ್ನು ನನ್ನ ನಡವಳಿಕೆಗಳ ಮೂಲಕ ಸಾಬೀತುಪಡಿಸುತ್ತೇನೆ ಎಂದು ಅವರು ತಿಳಿಸಿದರು. ಮೈತ್ರಿ ವಿಚಾರವನ್ನು ಪ್ರಸ್ತಾಪಿಸಿ ಬಿಜೆಪಿ ನಾಯಕರು ನೈತಿಕತೆ, ಅನೈತಿಕತೆಯ ಮಾತುಗಳನ್ನಾಡಿದ್ದಾರೆ. 2004ರಲ್ಲಿ ರಚನೆಯಾದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಅತಂತ್ರಗೊಳಿಸಲು ನಾನು ಪ್ರಮುಖ ಪಾತ್ರವಹಿಸಿದ್ದೆ. ಆಗಿನ ಸಂದರ್ಭಗಳು ಬೇರೆ ಇತ್ತು ಎಂದು ಅವರು ಹೇಳಿದರು. ತಮಗೆ ಬೆಂಬಲ ಕೊಟ್ಟಿರುವ ಕಾಂಗ್ರೆಸ್ ಎಲ್ಲಾ ನಾಯಕರಿಗೂ ಕುಮಾರಸ್ವಾಮಿ ತಮ್ಮ ಮೊದಲ ಸುದ್ದಿಗೋಷ್ಟಿಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ..ಮೈತ್ರಿ ಸರ್ಕಾರ ಅತ್ಯಂತ ಸುಭದ್ರವಾಗಿ ಮುನ್ನಡೆಯುತ್ತದೆ ಎಂದು ಅವರು ಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Comments