ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?

ದೆಹಲಿಯಲ್ಲಿ ಮಾತನಾಡಿದ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂಬ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ನನಗೆ ಬೆಂಬಲ ನೀಡಿದ್ದಾರೆ, ಬೆಂಬಲದ ಮುಲಾಜಿನಲ್ಲಿದ್ದೇನೆ' ಎಂದು ಹೇಳಿದ್ದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಅಸಮಾಧಾನಗಳಿಲ್ಲ. ಎರಡೂ ಪಕ್ಷದವರು ಖಾತೆಗಳನ್ನು ಹಂಚಿಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ ಎಂದರು. ರಾಜ್ಯವನ್ನು ಅಭಿವೃದ್ಧಿ ಮಾಡುವ ಜವಾಬ್ದಾರಿ ನನ್ನ ಮೇಲಿದೆ. ನಾನು ಕಾಂಗ್ರೆಸ್ ನಾಯಕರ ಅನುಮತಿ ಪಡೆದು ಕೆಲಸ ಮಾಡಬೇಕು. ಅವರ ಅನುಮತಿ ಇಲ್ಲದೇ ನಾನು ಏನೂ ಮಾಡುವಂತಿಲ್ಲ. ಅವರು ನಮಗೆ ಬೆಂಬಲ ನೀಡಿದ್ದಾರೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
Comments