ರೈತರಿಗೆ ಸಿಹಿ ಸುದ್ದಿ ನೀಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ಈ ಹೇಳಿಕೆ..!!
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಹೇಳಿದ್ದೆ.ಅದಕ್ಕಿಂತಲೂ ಹೆಚ್ಚು ಅಂತರದಲ್ಲಿ ಗೆಲುವು ಸಾಧಿಸಿದ್ದೇನೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯರನ್ನು ಇದುವರೆಗೂ ನಾನು ಭೇಟಿ ಮಾಡಿಲ್ಲ. ವಿಧಾನಸಭೆಯಲ್ಲೂ ಇಬ್ಬರೂ ಮುಖಾಮುಖಿ ಆಗಿಲ್ಲ. ಭೇಟಿ ಮಾಡದೇ ಇದ್ದರೂ ಪರವಾಗಿಲ್ಲ. ಪಕ್ಷದ ಮುಖಂಡರು ಕೈಗೊಂಡಿರುವ ತೀರ್ಮಾನಕ್ಕೆ ಬದ್ದವಾಗಿರುತ್ತೇವೆ ಎಂದು ಸ್ಪಷ್ಟಪಡಿಸಿದರು. ಸಂಪೂರ್ಣ ಬಹುಮತ ನೀಡಿದರೆ 24 ಗಂಟೆಯಲ್ಲಿ ಸಾಲಮನ್ನಾ ಮಾಡುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿದ ಮಾಹಿತಿ ನನ್ನ ಬಳಿ ಇದೆ. ಆದರೆ ಇದೀಗ ನಮಗೆ ಪೂರ್ಣ ಬಹುಮತ ಇಲ್ಲ. ಹಾಗಾಗಿ ಒಂದು ವಾರ ಅವಕಾಶ ಕೊಡಿ ಎಂದು ಕುಮಾರಸ್ವಾಮಿ ಕೇಳಿದ್ದಾರೆ. ಆದರೆ ಇದನ್ನು ಪರಿಗಣಿಸದೇ ಬಿಜೆಪಿ ಬಂದ್ ಮಾಡಿದೆ. ಯಾವುದೇ ಕಾರಣಕ್ಕೂ ಸಾಲಮನ್ನಾದಿಂದ ಎಚ್.ಡಿ.ಕುಮಾರಸ್ವಾಮಿಯವರು ಹಿಂದೆ ಸರಿಯಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Comments