Flash News: ನೂತನ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್… ಯಾವ ಪಕ್ಷಕ್ಕೆ ಯಾವ ಖಾತೆ..!?ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಸಿಎಂ ಎಚ್.ಡಿ.ಕುಮಾರಸ್ವಾಮಿ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ಶನಿವಾರ ಸಂಪುಟ ವಿಸ್ತರಣೆ ನಡೆಯಲಿದ್ದು, ರಾಜಭವನದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.
ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್‌ನ 12, ಜೆಡಿಎಸ್‌ನ 8 ಶಾಸಕರು ಎಚ್.ಡಿ.ಕುಮಾರಸ್ವಾಮಿಯವರು ಸಂಪುಟ ಸೇರಲಿದ್ದಾರೆ. ಶುಕ್ರವಾರ ಮಧ್ಯಾಹ್ನ ಎಚ್.ಡಿ.ಕುಮಾರಸ್ವಾಮಿಯವರು ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ನೂತನ ಸಚಿವರ ಪಟ್ಟಿಯನ್ನು ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಖಾತೆಗಳ ಹಂಚಿಕ ಬಗ್ಗೆ ಇದ್ದ ಗೊಂದಲ ನಿವಾರಣೆಯಾಗಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸದಲ್ಲಿ ಇಂದು 12 ಗಂಟೆಗೆ ಅಂತಿಮ ಸುತ್ತಿನ ಸಭೆ ನಡೆಯಲಿದೆ. ಎಚ್.ಡಿ.ಕುಮಾರಸ್ವಾಮಿ, ಜಿ.ಪರಮೇಶ್ವರ, ಕೆ.ಸಿ.ವೇಣುಗೋಪಾಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಹಣಕಾಸು ಸೇರಿದಂತೆ ಪ್ರಮುಖ ಖಾತೆಗಳನ್ನು ಜೆಡಿಎಸ್‌ಗೆ ಬಿಟ್ಟಕೊಡಲಾಗಿದೆ. ಗೃಹ ಖಾತೆ ಕಾಂಗ್ರೆಸ್ ಪಕ್ಷದ ಪಾಲಾಗಲಿದೆ.
ಜೆಡಿಎಸ್ ಪಕ್ಷಕ್ಕೆ ಸಿಗುವ ಸಂಭಾವ್ಯ ಖಾತೆಗಳು :
ಜೆಡಿಎಸ್ : ಹಣಕಾಸು, ಇಂಧನ, ಲೋಕೋಪಯೋಗಿ, ಸಹಕಾರ, ಅಬಕಾರಿ ಸೇರಿದಂತೆ ಪ್ರಮುಖ ಖಾತೆಗಳು ಜೆಡಿಎಸ್ ಪಾಲಾಗಲಿವೆ.
ಕಾಂಗ್ರೆಸ್ ಪಕ್ಷಕ್ಕೆ ಸಿಗುವ ಸಂಭಾವ್ಯ ಖಾತೆಗಳು :
ಕಾಂಗ್ರೆಸ್ : ಗೃಹ, ಕಂದಾಯ, ಆರೋಗ್ಯ, ಪಂಚಾಯತ್ ರಾಜ್, ಜಲಸಂಪನ್ಮೂಲ, ವಸತಿ, ಗಣಿ, ಕೃಷಿ, ಸಮಾಜ ಕಲ್ಯಾಣ ಖಾತೆಗಳು ಕಾಂಗ್ರೆಸ್ ಪಾಲಾಗಲಿವೆ.
Comments