ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ನಗರ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ





ಇಂದು ನಗರ ಜೆಡಿಎಸ್ ಪಕ್ಷದ ವತಿಯಿಂದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು, ಇತ್ತೀಚೆಗೆ ಅನಂತಕುಮಾರ್ ತಮ್ಮ ಭಾಷಣದಲ್ಲಿ ಜೆಡಿಎಸ್ ಪಕ್ಷವನ್ನು ಪುಟಗೋಸಿ ಪಕ್ಷ ಎಂದು ಟೀಕಿಸಿದ್ದರು, ಅದರ ವಿರುದ್ಧ ಆಕ್ರೋಶಗೊಂಡ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನಗರದ ತಾಲ್ಲೂಕು ಕಛೇರಿ ವೃತ್ತದಲ್ಲಿ ಸಚಿವರ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟಿಸಿದರು. ಪ್ರತಿಭಟನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡರು, ನಗರ ಘಟಕ ಜೆಡಿಎಸ್ ಅಧ್ಯಕ್ಷ ರವಿಕುಮಾರ್, ಕಾರ್ಯಾಧ್ಯಕ್ಷ ಪಿ.ಸಿ.ಲಕ್ಷ್ಮಿನಾರಾಯಣ್, ಪ್ರಧಾನ ಕಾರ್ಯದರ್ಶಿ ಅಖಿಲೇಶ್, ತಾಲ್ಲೂಕು ಅಧ್ಯಕ್ಷ ಲಕ್ಷ್ಮೀಪತಿ, ನಗರಸಭಾ ಸದಸ್ಯರಾದ ಶಿವಕುಮಾರ್, ಮಲ್ಲೇಶ್ ಮುಖಂಡರಾದ ಪದ್ಮನಾಬ್, ರಾಮಣ್ಣ ಮತ್ತು ಕಾರ್ಯಕರ್ತರು ಹಾಜರಿದ್ದರು.
Comments