ಸಂಪುಟ ವಿಸ್ತರಣೆ ಸಂಬಂಧ ಸಿಎಂ ಕುಮಾರ ಸ್ವಾಮಿ ಹೇಳಿದ್ದೇನು?

ವಿಧಾನ ಸಭಾ ಚುನಾವಣೆ ಮುಗಿದು, ಫಲಿತಾಂಶ ಹೊರಬಂದರೂ ಇನ್ನೂ ರಾಜಕೀಯದ ಕಾವು ಮಾತ್ರ ಕಡಿಮೆ ಆಗಿಲ್ಲ. ದಿನದಿಂದ ದಿನಕ್ಕೆರಾಜಕೀಯ ವಲಯದಲ್ಲಿ ಸಾಕಷ್ಟು ಬದಲಾವಣೆಗಳು ಆಗುತ್ತಲೇ ಇವೆ.
ಸಚಿವ ಸಂಪುಟ ವಿಸ್ತರಣೆ ಸಂಬಂಧವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಶಾಸಕರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ ಎಂದು ಸಿಎಂ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ನಮ್ಮ ಎಲ್ಲಾ ಶಾಸಕರ ಜೊತೆ ಸಭೆಯನ್ನು ನಡೆಸಿದ್ದೆವು, ಉತ್ತಮ ಆಡಳಿತ, ಪಕ್ಷದ ಮುಂದಿನ ಭವಿಷ್ಯ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆಯೂ ಕೂಡ ಚರ್ಚಿಸಲಾಯಿತು. ನಮ್ಮ ಶಾಸಕರ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ, ನಮ್ಮ ಮುಂದಿನ ಸಂಪುಟಕ್ಕೆ ಸಚಿವರನ್ನು ಆಯ್ಕೆ ಮಾಡಲು ಪಕ್ಷದ ರಾಜ್ಯಾಧ್ಯಕ್ಷರಿಗೆ ಪೂರ್ಣ ಸ್ವಾತಂತ್ರ್ಯವನ್ನು ನೀಡಿದ್ದಾರೆ ಎಂದು ಸಿಎಂ ಕುಮಾರಸ್ವಾಮಿಯವರು ತಿಳಿಸಿದ್ದಾರೆ.
Comments