ಅಧಿಕಾರ ಅವಧಿಯ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಎಚ್’ಡಿಕೆ

ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದ ಹಿನ್ನಲೆ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಮುಂದಾದರು . ಇದೀಗ ಸಚಿವ ಸಂಪುಟ ವಿಸ್ತರಣೆಯಾಗಿದ್ದು ಮುಂಬರುವ ಐದು ವರ್ಷಗಳಲ್ಲಿಯೂ ನಮ್ಮದೇ ಸರಕಾರ ಬರಲಿದೆ ಎಂದು ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ನಮ್ಮ ಸರ್ಕಾರ ಐದು ವರ್ಷ ಬಾಳಿಕೆ ಬರುವ ಬಗ್ಗೆ ಅನುಮಾನ ಬೇಡ. ಮುಂದಿನ ಅವಧಿಗೂ ನಮ್ಮ ಸರ್ಕಾರವೇ ಆಡಳಿತ ನಡೆಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು, ಸುಭದ್ರ ಆಡಳಿತ ಕೊಡುವ ವಿಚಾರದಲ್ಲಿ ಎರಡೂ ಪಕ್ಷಗಳೂ ಬದ್ದವಾಗಿವೆ ಎಂದರು. ರೈತರ ಸಾಲ ಮನ್ನಾ ಮಾಡುವ ಕುರಿತು ಪ್ರಕ್ರಿಯೆಗಳು ಆರಂಭವಾಗಿವೆ. ಸಾಲಮನ್ನಾಕ್ಕೆ ಬ್ಯಾಂಕ್ ಅಧಿಕಾರಿಗಳ ಚೊತೆಗೆ ಚರ್ಚೆ ಸೇರಿದಂತೆ ಹಲವು ಕೆಲಸಗಳು ನಡೆಯುತ್ತಿದೆ ಎಂದರು.
Comments