ವಿಶ್ವ ಯೋಗ ದಿನಾಚರಣಾ ಪ್ರಯುಕ್ತ ಇಂದಿನಿಂದ ಪ್ರಾರಂಭವಾದ ಯೋಗ ಮತ್ತು ಪ್ರಾಣಾಯಾಮ ಶಿಬಿರ





ಜೂನ್ 21ರಂದು ನಡೆಯುವ ವಿಶ್ವ ಯೋಗ ದಿನಾಚರಣೆ ಅಂಗವಾಗಿ ನಗರದ ಸಾರ್ವಜನಿಕರಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ವಾರಗಳ ಕಾಲ [11-06-2018 ರಿಂದ 18-06-2018 ರವರೆಗೆ ಬೆಳಿಗ್ಗೆ 5-15 ರಿಂದ 7 ಘಂಟೆಯವರೆಗೆ] ಯೋಗ ಮತ್ತು ಪ್ರಾಣಾಯಾಮ ಶಿಬಿರವನ್ನು ಪರಮಪೂಜ್ಯ ಶ್ರೀ ಶ್ರೀ ದಿವ್ಯಜ್ಞಾನಾನಂದಗಿರಿ ಸ್ವಾಮೀಜಿಯವರು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಯೋಗಾಭ್ಯಾಸವನ್ನು ಪ್ರಾರಂಭಿಸಿದರು, ಕಾರ್ಯಕ್ರಮದ ಮೊದಲ ದಿನ ನೂರು ಮಂದಿ ಯೋಗ ಪಟುಗಳು ಭಾಗವಹಿಸಿದ್ದರು. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕೋರಲಾಗಿದೆ, ಶಿಬಿರವನ್ನು ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ಆಯೋಜಿಸಿದ್ದರು.
Comments