ಹಿರಿಯ ನಾಗರೀಕರಿಗೆ ಸಿಎಂ ಎಚ್’ಡಿಕೆ ಕೊಟ್ಟ್ರು ಬಂಪರ್ ಗಿಫ್ಟ್..!!
65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪಿಂಚಣಿ ನೀಡುವ ಭರವಸೆ ನೀಡಿದ್ದೆ. ಅದಕ್ಕೆ ನಾನು ಬದ್ಧನಾಗಿದ್ದು ಮುಂದಿನ ಬಜೆಟ್ ನಲ್ಲಿ ಜಾರಿಗೆ ತರುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಾನು ಎಂದೂ ಪೊಳ್ಳು ಭರವಸೆಗಳನ್ನು ನೀಡುವುದಿಲ್ಲ. ಸರಕಾರದ ಬೊಕ್ಕಸಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆ ಬಾರದ ರೀತಿಯಲ್ಲಿ ರೈತರ ಸಾಲ ಮನ್ನಾ ಮಾಡಬೇಕಾಗಿದೆ. ಚುನಾವಣೆಯ ವೇಳೆ ಹಿರಿಯ ನಾಗರಿಕರಿಗೆ ಪಿಂಚಣಿ ಯೋಜನೆ ಜಾರಿಗೆ ತರುತ್ತೇನೆ ಎಂದು ಆಶ್ವಾಸನೆ ಕೊಟ್ಟಿದ್ದು ನನ್ನ ಆಂತರಿಕ ಒತ್ತಾಯದಿಂದ ಹೇಳಿದ್ದೆ ಎಂದರು. ಆಸ್ಪತ್ರೆಗಳು ಬಹಳ ಕೆಟ್ಟ ಪರಿಸ್ಥಿತಿಯಲ್ಲಿವೆ. ಹಾಗಾಗಿ ಒಂದು ಬಡ ಕುಟುಂಬ 10 ರಿಂದ 20 ಲಕ್ಷ ಹಣವನ್ನು ಆರೋಗ್ಯ ಕಾಪಾಡಿಕೊಳ್ಳಲು ಖರ್ಚು ಮಾಡುವ ಸ್ಥಿತಿಯಲ್ಲಿ ಇಲ್ಲ. ನಾನು ಮಾಡಿದ ಈ ಘೋಷಣೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳುವ ಮೂಲಕ ಹಿರಿಯ ಜೀವಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸರ್ಕಾರಿ ಸಂಸ್ಥೆಗಳಲ್ಲಿ ನಡೆಯುವ ದುಂದುವೆಚ್ಚಕ್ಕೆ ಕಡಿವಾಣಹಾಕಲು ನಾನು ಬದ್ಧನಿದ್ದೇನೆ ಎಂದು ಹೇಳಿದ ಅವರು ನಾನು ಬಳಸುತ್ತಿರುವ ಸರ್ಕಾರಿ ಕಾರಿಗೆ ನನ್ನ ಸ್ವಂತ ದುಡ್ಡಿನಿಂದಲೇ ಇಂಧನವನ್ನು ಹಾಕಿಸಿಕೊಳ್ಳುತ್ತಿದ್ದೇನೆ. ಬದಲಾವಣೆ ತರಬೇಕಾದರೆ ತುಂಬಾ ಸಾಹಸ ಮಾಡಬೇಕಿದೆ. ನನ್ನ ರಾಜ್ಯದ ಜನತೆ ಕಟ್ಟುವ ತೆರಿಗೆ ಹಣವನ್ನು ದುಂದು ವೆಚ್ಚ ಮಾಡದೇ ಒಂದೊಂದು ಪೈಸೆಯೂ ಸದ್ಭಳಕೆ ಆಗಬೇಕಿದೆ ಎಂದು ಹೇಳಿದರು.
Comments