ರಾಮನಗರ ಕ್ಷೇತ್ರದಿಂದ ಅಖಾಡಕ್ಕಿಳಿಯಲು ಜೆಡಿಎಸ್ ನಿಂದ ಕೇಳಿ ಬಂತು ಈ ಅಚ್ಚರಿ ಹೆಸರು...!!
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೆರವು ಮಾಡಿರುವುದರಿಂದ ನಡೆಯಬೇಕಾಗಿರುವ ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆ ಅವರ ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡರ ಕುಟುಂಬದಿಂದ ಚುನಾವಣಾ ಅಖಾಡಕ್ಕಿಳಿಯಲು ಇದೀಗ ಮತ್ತೊಂದು ದಲ್ಲಿ ಮತ್ತೊಂದು ಅಚ್ಚರಿಯ ಹೆಸರು ಕೇಳಿಬಂದಿದೆ.
ಹೌದು..,ಚಿತ್ರನಟರೂ ಆಗಿರುವ ಮುಖ್ಯಮಂತ್ರಿಗಳ ಪುತ್ರ ನಿಖಿಲ್ ಹೆಸರು ಇದೇ ಮೊದಲ ಬಾರಿ ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಸ್ಪರ್ಧೆಗೆ ಕೇಳಿಬರುತ್ತಿದೆ. ಕುಮಾರಸ್ವಾಮಿ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರಿಂದ ಚನ್ನಪಟ್ಟಣ ಉಳಿಸಿಕೊಂಡು ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಅಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ಥಾನಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಹೆಸರುಗಳು ಬಲವಾಗಿ ಕೇಳಿಬಂದಿವೆ. ಇದನ್ನು ಸ್ವತಃ ಅನಿತಾ ಕುಮಾರಸ್ವಾಮಿ ಅವರೇ ದೃಢಪಡಿಸಿದ್ದಾರೆ. ಪದ್ಮನಾಭನಗರದಲ್ಲಿನ ದೇವೇಗೌಡ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅನಿತಾ ಕುಮಾರಸ್ವಾಮಿ ಅವರು, ರಾಮನಗರ ಕ್ಷೇತ್ರಕ್ಕೆ ನನ್ನ ಮತ್ತು ನಿಖಿಲ್ ಹೆಸರು ಸ್ಪರ್ಧೆಯಲ್ಲಿರುವುದು ನಿಜ. ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಚುನಾವಣೆ ಘೋಷಣೆಯಾದ ಬಳಿಕ ಪಕ್ಷದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
Comments