ರಾಮನಗರ ಉಪಚುನಾವಣೆ : ಜೆಡಿಎಸ್ ಅಭ್ಯರ್ಥಿ ಆಯ್ಕೆ ಕುರಿತು ಬಿಗ್ ಟ್ವಿಸ್ಟ್..!!
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಿದ ಕುಮಾರಸ್ವಾಮಿ ರಾಮನಗರ ಕ್ಷೇತ್ರವನ್ನು ಬಿಟ್ಟುಕೊಟ್ಟು ಚನ್ನಪಟ್ಟಣವನ್ನು ಉಳಿಸಿಕೊಂಡರು. ಇದೀಗ ರಾಮನಗರದಲ್ಲಿ ಉಪಚುನಾವಣೆಯು ನಡೆಯಲಿದ್ದು ಕಣಕ್ಕೆ ಯಾರು ಇಳಿಯಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿವೆ. ಇದೀಗ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ..ಏನು ಅಂತೀರಾ? ಹಾಗಾದ್ರೆ ಮುಂದೆ ಓದಿ...
ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಗೆಲುವು ಸಾಧಿಸಿದ್ದು, ಅದರಲ್ಲಿ ಚನ್ನಪಟ್ಟಣ ಉಳಿಸಿಕೊಂಡು, ರಾಮನಗರವನ್ನ ಬಿಟ್ಟಿದ್ದಾರೆ. ಆದ್ದರಿಂದ ಈಗ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಈಗ ರಾಮನಗರ ಕ್ಷೇತ್ರದಿಂದ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಕಣಕ್ಕೆ ಇಳಿಯಲು ಸಿದ್ದರಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ರಾಮನಗರ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಕ್ಕೆ ಪ್ರಜ್ವಲ್ ಪಟ್ಟುಹಿಡಿದಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಅಂಬರೀಶ್ ಅವರಿಗೆ ಕ್ಷೇತ್ರ ಬಿಟ್ಟುಕೊಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Comments