ಭಾರತೀಯ ಜನತಾ ಪಾರ್ಟಿವತಿಯಿಂದ ವಿಜಯೋತ್ಸವ
ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅ.ದೇವೇಗೌಡ ರವರು ಜಯ ಗಳಿಸಿದ್ದಕ್ಕಾಗಿ ಇಂದು ನಗರದ ತಾಲ್ಲೂಕು ಕಛೇರಿ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿವತಿಯಿಂದ ವಿಜಯೋತ್ಸವನ್ನು ಆಚರಿಸಲಾಯಿತು. ತಾಲ್ಲುಕು ಬಿಜೆಪಿ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿರವರು, ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಚ್.ಎಸ್.ಶಿವಶಂಕರ್ ರವರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪುಷ್ಪಾಶಿವಶಂಕರ್ ರವರು, ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎನ್.ನಾಗರಾಜುರವರು, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ವತ್ಸಲಾರವರು, ನಗರ ಬಿಜೆಪಿ ಕಾರ್ಯದರ್ಶಿ ಕೃಷ್ಣಮೂರ್ತಿ, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಶಿವರವರು, ತಾಲ್ಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಡಿ.ಬಿ.ಚಂದ್ರೇಗೌಡರವರು ಇನ್ನೂ ಅನೇಕ ಬಿಜೆಪಿ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Comments