ಸರ್ಕಾರಿ ಶಾಲೆಗಳಿಗೆ ಸಿಗಲಿದೆ ಹೊಸ ಯೋಜನೆ : ಸಿಹಿಸುದ್ದಿ ಕೊಟ್ಟ ಸಿಎಂ ಎಚ್’ಡಿಕೆ
ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಸ್ಥಿತಿಯಲ್ಲಿದ್ದು ಈಗಾಗಲೇ ರಾಜ್ಯದಲ್ಲಿರುವ ಏಕೋಪಾಧ್ಯಾಯ ಶಾಲೆಗಳನ್ನು ಮುಚ್ಚುವುದಕ್ಕೆ ಸರ್ಕಾರ ಚಿಂತನೆ ಮಾಡಿದೆ ಎನ್ನುವ ಸುದ್ದಿಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒಳ್ಳೆಯ ಸುದ್ದಿಯನ್ನು ನೀಡಿದ್ದಾರೆ.
ಹೌದು.. ಯಾವುದೇ ಕಾರಣಕ್ಕೂ ಸರ್ಕಾರ ಶಾಲೆಗಳನ್ನು ಮುಚ್ಚದಂತೆ ಸರ್ಕಾರ ಎಚ್ಚರಿಕೆ ವಹಿಸುತ್ತದೆ ಎಂದು ಹೇಳಿರುವ ಅವರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರುವುದಕ್ಕೆ ಸರ್ಕಾರ ತನ್ನದೇ ಆದ ಯೋಜನೆಗಳನ್ನು ಹಾಕಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಇರುವ ಸರ್ಕಾರಿ ಶಾಲೆಗಳು ಇನ್ನು ಮುಂದೆ ಕಾನ್ವೆಂಟ್ಗಳಾಗುತ್ತವೆ, ಅಂದ್ರೆ ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಂತೆ ಎಲ್.ಕೆ.ಜಿ (LKG) ಯನ್ನು ಪ್ರಾರಂಭಮಾಡಿ ಖಾಸಗಿ ಶಾಲೆಗಳಂತೆ ಉತ್ತಮ ಶಿಕ್ಷಣ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಹೇಳಿರುವ ಅವರು ಮಾತೃಭಾಷೆಯ ಜೊತೆಗೆ ಇಂಗ್ಲೀಷ್ ವಿಷಯವನ್ನು ಕೂಡ ಒಂದು ವಿಷಯವಾಗಿ ಮಕ್ಕಳಿಗೆ ಕಲಿಸುವಂತೆ ಕ್ರಮ ಕೈಗೊಳ್ಳುವ ಸಿಎಂ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಹಾಗೇನಾದರೂ ಆದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿ ಮತ್ತು ಶಿಕ್ಷಣ ವ್ಯಾಪಾರೀ ಮನೋಭಾವನೆ ಕಡಿಮೆಯಾಗುತ್ತದೆ ಜೊತೆಗೆ ಒಳ್ಳೆಯ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ನೀಡಿದಂತಾಗುತ್ತದೆ. ಮುಖ್ಯಮಂತ್ರಿ ಅವರ ಈ ಯೋಜನೆ ಆದಷ್ಟು ಬೇಗ ಜಾರಿಗೆ ಬರಲಿ ಎಂದು ಪೋಷಕರ ಒತ್ತಾಯವಾಗಿದೆ.
Comments