ಮೈತ್ರಿ ಸರ್ಕಾರದ ಭವಿಷ್ಯ ಕುರಿತು ಸಿಎಂ ಎಚ್'ಡಿಕೆ ನೀಡಿದ ಶಾಕಿಂಗ್ ಹೇಳಿಕೆ..!!

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮಂತ್ರಿ ಸ್ಥಾನ ಸಿಗದವರು ಭಿನ್ನಮತೀಯ ಚಟುವಟಿಕೆ ಆರಂಭಿಸಿದ ಕಾರಣ ಸರ್ಕಾರದ ಭವಿಷ್ಯ ಕುರಿತು ಅನುಮಾನಗಳು ವ್ಯಕ್ತವಾಗಿದ್ದವು. ಇದೀಗ ಸಿಎಂ ಎಚ್.ಡಿ.ಕುಮಾರಸ್ವಾಮಿಯರೇ ಈ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಏನು ಅಂತೀರಾ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ ಓದಿ...
ಮೈತ್ರಿ ಸರ್ಕಾರ ರಚನೆಯಾದ ಹಿನ್ನಲೆಯಲ್ಲಿ ಸಾಕಷ್ಟು ಗೊಂದಲಗಳು ಮನೆ ಮಾಡಿದ್ದವು.ಇದರೆ ನಡುವೆಯೇ ಸಿಎಂ ಕುಮಾರಸ್ವಾಮಿ ಸರಿಯಾಗಿಯೇ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು, ಇನ್ನೂ ಒಂದು ವರ್ಷ ಕಾಲ ನನ್ನನ್ನು ಯಾರೂ ಟಚ್ ಮಾಡಲು ಸಾಧ್ಯವಿಲ್ಲ. ಲೋಕಸಭಾ ಚುನಾವಣೆಯವರೆಗೂ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಕೆಲಸ ಮಾಡಬೇಕಾದರೆ ಸಾಕಷ್ಟು ಜನ ಕಾಲೆಳೆಯುವವರು ಇರುತ್ತಾರೆ. ಆದರೆ ಪ್ರಕೃತಿಯೂ ನನ್ನ ಪರವಾಗಿದ್ದು, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
Comments