ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಅಂಬಿ ನಡೆ..!ಜೆಡಿಎಸ್ ಗೆ ಸೇರ್ಪಡೆ..!?
ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಸಿಟ್ಟಾಗಿ ಪರೋಕ್ಷವಾಗಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಚುನಾವಣೆ ವೇಳೆಯಲ್ಲಿ ಬೆಂಬಲ ವ್ಯಕ್ತಪಡಿಸಿದ್ದ ನಟ, ಮಾಜಿ ಸಂಸದ, ಮಾಜಿ ಶಾಸಕ, ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್.
ಇವೆಲ್ಲದರ ಅಂಬರೀಶ್ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಪಕ್ಷವನ್ನು ಸೇರುತ್ತಾರೆ ಎನ್ನುವ ಗುಸುಗುಸು ಮಾತೊಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಈ ನಡುವೆ ಇದಕ್ಕೆ ಮಾತಿಗೆ ಪುಷ್ಠಿ ನೀಡುವಂತೆ ಘಟನೆಯೊಂದು ನಡೆದಿದೆ. ಜೆಡಿಎಸ್‌ನ ಡಿ.ಸಿ.ತಮ್ಮಣ್ಣ ಸಾರಿಗೆ ಸಚಿವರಾದ ಬಳಿಕ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಅವರ ಸ್ವಾಗತಕ್ಕಾಗಿ ಹಾಕಿರುವ ಫ್ಲೆಕ್ಸ್‌ಗಳಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಸಿಎಂ ಕುಮಾರಸ್ವಾಮಿ, ಸಚಿವ ತಮ್ಮಣ್ಣ ಅವರ ಭಾವಚಿತ್ರದ ಜೊತೆ ಅಂಬಿ ಫೋಟೋ ಮಿಂಚುತ್ತಿದೆ. ತಮ್ಮಣ್ಣ ಸೇರಿದಂತೆ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಜೆಡಿಎಸ್ ಗೆಲುವಿಗೆ ಅಂಬಿ ಸಹಕರಿಸಿದ್ದರು. ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಾರ? ಎನ್ನುವ ಅನುಮಾನಗಳಿಗೆ ಮತ್ತಷ್ಟು ಪುಷ್ಟಿ ಸಿಕ್ಕಿದ ಹಾಗೇ ಆಗಿದೆ.
Comments