Flash News: ಮಂಡ್ಯ ಲೋಕಸಭಾ ಉಪಚುನಾವಣೆ ಗೆ ಜೆಡಿಎಸ್ ನಿಂದ ಅಖಾಡಕ್ಕಿಳಿಯಲು ಕೇಳಿ ಬಂದ ಈ ಅಚ್ಚರಿ ಹೆಸರು.. !?
ವಿಧಾನಸಭಾ ಚುನಾವಣೆ ಮುಗಿದ ಬೆನ್ನಲೆ ಲೋಕಸಭಾ ಉಪಚುನಾವಣೆ ಶುರುವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಲಕ್ಷ್ಮಿ ಅಶ್ವಿನ್‍ಗೌಡ ಸ್ಪರ್ಧಿಸುತ್ತಿದ್ದು, ಅವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಪಕ್ಷದಿಂದ ರಮ್ಯಾ ಸ್ಪರ್ಧಿಸುತ್ತಾರೋ ಇಲ್ಲವೋ ಎನ್ನುವ ಬಗ್ಗೆ ಮಂಡ್ಯ ಜಿಲ್ಲೆಯ ರಾಜಕೀಯದಲ್ಲಿ ವಿಶೇಷವಾಗಿ ಚರ್ಚೆ ನಡೆಯುತ್ತಿದೆ..
ಇತ್ತೀಚೆಗಷ್ಟೇ ಐಆರ್‍ಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಲಕ್ಷ್ಮಿ ಅಶ್ವಿನ್‍ಗೌಡ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ತಮ್ಮನ್ನ ತಾವು ಗುರುತಿಸಿಕೊಂಡಿದ್ದಾರೆ. ಲೋಕಸಭೆ ಉಪಚುನಾವಣೆ ಮತ್ತು ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ನನಗೇ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಲಕ್ಷ್ಮಿ ಅಶ್ವಿನ್‍ಗೌಡ ಈ ಬಗ್ಗೆ ಪಕ್ಷದ ವರಿಷ್ಠರ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ತಿಳಿಸಿದ್ದಾರೆ. ಅದಷ್ಟೇ ಅಲ್ಲದೇ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿಯೂ ಕೂಡ ಜೆಡಿಎಸ್ ಜಯಭೇರಿಯನ್ನು ಬಾರಿಸಿದ್ದು ಕಾಂಗ್ರೆಸ್ ಪಕ್ಷವು ಸಂಪೂರ್ಣವಾಗಿ ಬುಡಕಚ್ಚಿದೆ. ಇದರಿಂದ ರಮ್ಯಾ ಅವರು ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಧೈರ್ಯ ಮಾಡುತ್ತಾರಾ ಎನ್ನುವ ಚರ್ಚೆಯು ಕೂಡ ಮಂಡ್ಯ ಜಿಲ್ಲೆಯಲ್ಲಿ ಪ್ರಾರಂಭವಾಗಿದೆ.
Comments