Breaking News : ರಾಮನಗರ ಉಪಚುನಾವಣಾ ಅಖಾಡಕ್ಕಿಳಿಯಲು ಜೆಡಿಎಸ್ ಅಭ್ಯರ್ಥಿ ಫಿಕ್ಸ್..!!
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿಯನ್ನು ಕಣಕ್ಕೆ ಇಳಿಸಲು ಎಚ್’ಡಿಕೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ರಾಮನಗರ ವಿಧಾನಸಭಾ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಆದರೆ ಇತ್ತ ಚನ್ನಪಟ್ಟಣದಲ್ಲಿಯೂ ಗೆಲುವು ಸಾಧಿಸಿದ್ದರಿಂದ ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ರಾಮನಗರ ಉಪಚುನಾವಣೆಗೆ ನಿಖಿಲ್ ಅಥವಾ ಅನಿತಾ ಅವರು ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿತ್ತು. ಇದೀಗ ಅನಿತಾ ಅವರು ಕಣಕ್ಕೆ ಇಳಿಯುವುದು ಬಹುತೇಕ ಅಂತಿಮವಾಗಿದ್ದು, ಚುನಾವಣೆ ಘೋಷಣೆ ಬಳಿಕ ಅನಿತಾ ಕುಮಾರಸ್ವಾಮಿ ಅವರ ಹೆಸರನ್ನು ಜೆಡಿಎಸ್ ಅಧಿಕೃತ ಮಾಡಲಿದೆ ಎನ್ನಲಾಗಿದೆ.
Comments