ಡಿಕೆಶಿ ರಾಜೀನಾಮೆ ಕುರಿತು ಸಿಎಂ ಎಚ್’ಡಿಕೆ ಹೇಳಿದ್ದೇನು?
ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಸಚಿವ ಡಿ.ಕೆ.ಶಿವಕುಮಾರ್ ರಾಜೀನಾಮೆ ಯಾಕೆ ಕೊಡಬೇಕು? ಕಾನೂನಾತ್ಮಕವಾಗಿ ಡಿಕೆಶಿ ಅವರೊಂದಿಗೆ ನಾವು ಇದ್ದೇವೆ ಅಂತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕಾನೂನಾತ್ಮಕವಾಗಿ ಅವರು ಹೋರಾಟ ನಡೆಸುತ್ತಿದ್ದಾರೆ. ಇದನ್ನೇ ದೊಡ್ಡ ಸುದ್ದಿ ಮಾಡುವ ಅವಶ್ಯಕತೆ ಇಲ್ಲ. ಅವರಿಗೆ ಎಲ್ಲಾ ರೀತಿಯಲ್ಲಿ ಕಾನೂನುತ್ಮಕವಾಗಿ ಹೋರಾಟ ಮಾಡುವುದಕ್ಕೆ ಅವಕಾಶ ಇದೆ ಅಂತ ಹೇಳಿದ್ದಾರೆ. ಇದೇ ವೇಳೆ ಬಿಜೆಪಿಯವರು ಡಿ.ಕೆ ಶಿವಕುಮಾರ್ ಅವರ ರಾಜೀನಾಮೆ ಕೇಳುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿ.ಎಂ ಬಿಜೆಪಿಯವರು ಎಷ್ಟು ಬಾರಿ ರಾಜೀನಾಮೆ ನೀಡಿದ್ದಾರೆ? ಅದರ ಬಗ್ಗೆ ಮುಂದೆ ಮಾತನಾಡುತ್ತೇನೆ ಎಂದರು.
Comments