ಜಿ.ಟಿ.ದೇವೇಗೌಡರ ಖಾತೆ ಬದಲಾವಣೆ ಬಗ್ಗೆ ಸುಳಿವು..!!
ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರ ಖಾತೆ ಬದಲಾವಣೆಯ ಬಗ್ಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇನ್ನೆರಡು ದಿನಗಳಲ್ಲಿ ತಮ್ಮ ನಿರ್ಧಾರವನ್ನು ತಿಳಿಸಲಿದ್ದಾರೆ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ. ಮಹೇಶ್ ಹೇಳಿದ್ದಾರೆ.
ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾತನಾಡಿದ ಸಚಿವ ಸಾ.ರಾ. ಮಹೇಶ್ ಅವರು, ಆರೋಗ್ಯ ಸಮಸ್ಯೆಯಿಂದಾಗಿ ಇಂದಿನ ವಿಶ್ವ ಯೋಗ ದಿನ ಕಾರ್ಯಕ್ರಮದಲ್ಲಿ ಜಿ.ಟಿ.ದೇವೇಗೌಡರು ಭಾಗವಹಿಸುತ್ತಿಲ್ಲ. ಇನ್ನೆರಡು ದಿನಗಳಲ್ಲಿ ಎಲ್ಲ ಸರ್ಕಾರಿ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
Comments