ನೀರಾವರಿ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ ಕುಮಾರಸ್ವಾಮಿ!

ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ನೀರಿನ ಕೊರತೆ ಮಾಡಲ್ಲ. ರೈತರ ಅಗತ್ಯಕ್ಕೆ ಅನುಗುಣವಾಗಿ ನೀರು ಬಿಡಿಬೇಕು ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಖಡಕ್ ಸೂಚನೆ ನೀಡಿದ್ದಾರೆ.
ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳ ರೈತರ ಬೆಳೆಗೆ ನೀರು ಬಿಡಬೇಕು. ರೈತರ ವ್ಯವಸಾಯಕ್ಕೆ ಬೇಕಾದಂತೆ ನೀರು ಬಿಡುವ ಮೂಲಕ ನೀರು ಬಿಡುಗಡೆಗೆ ಕೊರತೆ ಮಾಡಬಾರದು ಎಂದು ಹೇಳಿದ್ದಾರೆ. ತಮಿಳುನಾಡಿನ ಕೋಟಾದ ನೀರು ಈಗಾಗಲೇ ಹರಿದು ಹೋಗಿದೆ. ಮತ್ತೆ ತಮಿಳುನಾಡಿನಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ. ನಮ್ಮ ರೈತರ ಹಿತ ಕಾಪಾಡಲು ಬೆಳೆಗಳಿಗೆ ನೀರು ಕೊಡಿ ಎಂದು ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಗೆ ಸಿಎಂ ಸೂಚಿಸಿದ್ದಾರೆ.
Comments