ಹೊಸ ಕಾರು ಖರೀದಿಗೆ ಅರ್ಜಿ ಹಾಕಿದ್ದ ನೂತನ ಸಚಿವರು, ಅಧಿಕಾರಿಗಳಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಎಚ್’ಡಿಕೆ
ಹೊಸ ಕಾರು ಖರೀದಿಗೆ ಕೋರಿ ಮುಖ್ಯ ಕಾರ್ಯದರ್ಶಿ ಕಚೇರಿಗೆ ಸಚಿವರು, ಅಧಿಕಾರಿಗಳು ಸೇರಿದಂತೆ 11 ಅರ್ಜಿಗಳು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಾಪಸ್ಸು ಕಳುಹಿಸಿದ್ದಾರೆ ಎನ್ನಲಾಗಿದೆ.
ಸಚಿವಾರದ ಕೆ.ಜೆ.ಜಾರ್ಜ್, ಡಿ.ಕೆ.ಶಿವಕುಮಾರ್, ಜಯಮಾಲಾ, ಪ್ರಿಯಾಂಕ ಖರ್ಗೆ, ಶಿವಾನಂದ ಪಾಟೀಲ್ ಮತ್ತು ಖಾದರ್ ಹೊಸ ಕಾರ್ ನೀಡುವಂತೆ ಅರ್ಜಿ ಸಲ್ಲಿಸಿದರು. ಅನುಮತಿ ಸಿಗದ ಹಿನ್ನೆಲೆಯಲ್ಲಿ ಸಚಿವರ ಕಾರು ಖರೀದಿ ಅರ್ಜಿಗಳು ವಾಪಸ್ ಮಾಡಲಾಗಿದೆ ಎನ್ನಲಾಗಿದೆ. ಅನಗತ್ಯ ವೆಚ್ಚಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಸಿ.ಎಂ ಎಚ್.ಡಿ.ಕುಮಾರಸ್ವಾಮಿ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮುಖ್ಯ ಕಾರ್ಯದರ್ಶಿ ಕಚೇರಿಗೆ ಆರು ಮಂದಿ ಸಚಿವರು ಮತ್ತು 5 ಮಂದಿ ಅಧಿಕಾರಿಗಳಿಂದ ಹೊಸ ಕಾರಿಗಾಗಿ ಅರ್ಜಿ ಬಂದಿದ್ದವು. ಈ ವರ್ಷ ಅನಗತ್ಯ ವೆಚ್ಚಕ್ಕಾಗಿ ಹಣ ನೀಡದಂತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಣಕಾಸು ಇಲಾಖೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
Comments