ಮೈತ್ರಿ ಸರ್ಕಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ಒಲಿದಿದೆ ಈ ಬಂಪರ್ ಆಫರ್..!

ಮೈತ್ರಿ ಸರ್ಕಾರ ರಚನೆಯಾದ ಮೇಲೆ ಮಾಜಿ ಸಿ.ಎಂ ಸಿದ್ದರಾಮಯ್ಯ ಅವರು ಯಾರ ಕೈಗೂ ಸಿಗದೇ ತಮ್ಮ ಪಾಡಿಗೆ ತಾವು ಬಾದಾಮಿ, ಮೈಸೂರು, ಧರ್ಮಸ್ಥಳ ಅಂತ ಟೂರ್ ಮಾಡುತ್ತಿದ್ದಾರೆ.
ಈ ನಡುವೆ ಸಿದ್ದರಾಮ್ಯ ಅವರಿಗೆ ಮೈತ್ರಿ ಸರ್ಕಾರದಲ್ಲಿ ಜೆಡಿಎಲ್ಪಿ ನಾಯಕ ಸ್ಥಾನ ಹೊರತು ಪಡಿಸಿ ಇನ್ಯಾವುದೇ ಸ್ಥಾನ ಮಾನ ಸಿಗದೇ ಇರುವುದಕ್ಕೆ ಸಿದ್ದರಾಮಯ್ಯ ಅವರ ಬೆಂಬಲಿಗರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಸಿದ್ದರಾಮಯ್ಯ ಅವರು ಖುಷಿಯಾಗುವಂತಂಹ ಸುದ್ದಿಯೊಂದನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೀಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸರ್ಕಾರದಿಂದಲೇ ಸಮನ್ವಯ ಸಮಿತಿ ರಚಿಸಿ ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಆದ್ದರಿಂದ ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲು ನಿರ್ಧಾರ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಸಮನ್ವಯ ಸಮಿತಿಯನ್ನು ಮೈತ್ರಿ ಸರ್ಕಾರಕ್ಕೆ ಸಲಹೆ ಕೊಡಲು ರಚನೆ ಮಾಡಲಾಗುತ್ತಿದೆ. ಆದ್ದರಿಂದ ಈ ಸಮನ್ವಯ ಸಮಿತಿ ರಚಿಸಿ ಆದೇಶ ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಖುಷಿಯಾಗಲಿದ್ದಾರೆ ಎನ್ನಲಾಗಿದೆ.
Comments