ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್ ಕೊಟ್ಟ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ
ಹಿಂದಿನ ಸಿದ್ದರಾಮಯ್ಯ ಸರ್ಕಾರ ಘೋಷಿಸಿದಂತೆ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ಸಿಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.
ಕಾಲೇಜು ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಲ್ಯಾಪ್ ಟಾಪ್ ವಿತರಣೆಗೆ ನೀಡಿದ್ದ ಅನುದಾನ ವಾಪಸ್ ಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಕಳೆದ ವರ್ಷ ಪರಿಶಿಷ್ಟ ವಿದ್ಯಾರ್ಥಿಗಳಿಗಷ್ಟೇ ಲ್ಯಾಪ್ ಟಾಪ್ ವಿತರಿಸಲಾಗಿದ್ದು, ಆಗ ಬಿಎ, ಬಿಕಾಂ, ಬಿಎಸ್ಸಿ, ಎಂಜಿನಿಯರಿಂಗ್, ವೈದ್ಯ ಕೋರ್ಸ್ ನ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಮೈಸೂರು, ಮಂಗಳೂರು, ಜಾನಪದ ಸೇರಿದಂತೆ ಕೆಲವು ವಿವಿಗಳಲ್ಲಿ ಖಾಲಿ ಇರುವ ಕುಲಪತಿಗಳ ಹುದ್ದೆ ಭರ್ತಿ ಬಗ್ಗೆ ಬಜೆಟ್ ಅಧಿವೇಶನದ ನಂತರ ಸಿಎಂ ಜೊತೆ ಚರ್ಚಿಸಿ ಕ್ರಮ ಜರುಗಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
Comments