ರೈತರು ಸಾಲಮನ್ನಾ ಕುರಿತು ಸಿದ್ದುಗೆ ತಿರುಗೇಟು ಕೊಟ್ಟ ಸಿಎಂ ಎಚ್'ಡಿಕೆ
ಇಂದು ವಿಧಾನಸೌಧದಲ್ಲಿ ರೈತರ ಸಾಲಮನ್ನಾ ವಿಚಾರ ಸಂಬಂಧ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರು ನಡೆಸುತ್ತಿರುವ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಖಡಕ್ ಟಾಂಗ್ ಕೊಟ್ಟಿದ್ದಾರೆ.
ವಿಧಾನಸೌಧದಲ್ಲಿ ಕಮೀಷನ್ ವ್ಯವಹಾರ ನಡೆಯುತ್ತಿದೆ. ಎಲ್ಲಿಂದ ಯಾರ್ಯಾರಿಗೆ ಹೇಗೆ ಕಮೀಷನ್ ಹೋಗುತ್ತಿದೆ ಎಂದು ನನಗೆ ಗೊತ್ತು. ಕಮೀಷನ್ ಕಾಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಮನ್ನಾ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ನಾನು ಯಾರ ಹಂಗಿನಲ್ಲೂ ಇಲ್ಲ. ಮುಖ್ಯಮಂತ್ರಿ ಸ್ಥಾನ ನನಗೆ ಯಾರೂ ಕೊಟ್ಟ ಭಿಕ್ಷೆಯಲ್ಲ. ಎಲ್ಲಿತನಕ ಆಡಳಿತದಲ್ಲಿರುತ್ತೇನೆ ಗೊತ್ತಿಲ್ಲ. ನಾನು ಅಧಿಕಾರದಲ್ಲಿರುವ ತನಕ ರೈತರಗಾಗಿ ಕೆಲಸ ಮಾಡುತ್ತೇನೆ. ಸಾಲ ಮನ್ನಾ ವಿಚಾರದಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ. ನನಗೆ ಉಪಮುಖ್ಯಮಂತ್ರಿ ಪರಮೇಶ್ವರ್, ಸಚಿವರು ಹಾಗೂ ಶಾಸಕರು ಬೆಂಬಲ ನೀಡಿದ್ದಾರೆ. ಹೀಗಾಗಿ ನಾನು ರೈತರಿಗೆ ಅನುಕೂಲಕರ ವಾಗುವಂತಹ ಕೆಲಸ ಮಾಡುತ್ತೇನೆ ಎಂದು ಸಿದ್ದರಾಮಯ್ಯ ನವರಿಗೆ ತಿರುಗೇಟು ನೀಡಿದರು.
ಇನ್ನು ಬಜೆಟ್ ಮಂಡನೆ ವಿಚಾರದಲ್ಲಿ ಚರ್ಚೆ ನಡೆಯುತ್ತಲೇ ಇದೆ. ನಾನು ಬಜೆಟ್ ಮಂಡನೆ ಮಾಡುತ್ತೇನೋ ಇಲ್ಲವೋ ಎಂಬುದು ಗೊತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇನ್ನೂ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸಾಲ ಮನ್ನಾ ಮಾಡಬೇಡಿ ಎಂದು ಹಣಕಾಸು ಇಲಾಖೆ ಅಧಿಕಾರಿಗಳೇ ಹೇಳುತ್ತಿರುವುದು ನನ್ನ ಗಮನಕ್ಕು ಬಂದಿದೆ, ಈ ರೀತಿ ಆದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸಿಎಂ ಖಡಕ್ ವಾರ್ನಿಂಗ್ ನೀಡಿದ್ದಾರೆ. ಈಗಾಗಲೇ ಸಹಕಾರಿ ಬ್ಯಾಂಕ್ ಗಳಲ್ಲಿನ 8 ಸಾವಿರ ಕೋಟಿ ರೂ ಸಾಲ ಮನ್ನಾ ಮಾಡಲಾಗಿದೆ. ಇನ್ನೂ 10 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಬೇಕು. ಮುಂದಿನ ಮಾರ್ಚ್ ಅಂತ್ಯದವರಗಿನ ಸಾಲ ಮನ್ನಾ ಮಾಡಬೇಕು ಎಂಬ ಒತ್ತಾಯವಿದೆ. ಅದೇ ವೇಳೆ ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಿರೋದ್ರಿಂದ 16,000 ಕೋಟಿ ರೂ. ಹೆಚ್ಚಿನ ಹೊರೆಯಾಗಿದೆ. ಮತ್ತೊಂದು ಕಡೆ ಮಾಜಿ ಮುಖ್ಯಮಂತ್ರಿ ಯವರು ತಮ್ಮ ಬಜೆಟ್ ನ್ನು ಮುಂದುವರಿಸಿ ಎಂದು ಹೇಳುತ್ತಿದ್ದಾರೆ.
Comments